ನವದೆಹಲಿ: ದೇಶದಲ್ಲಿ ಕೋವಿಡ್ 2ನೇ ಅಲೆ ಬೀತಿ ಆರಂಭವಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,10, 05,850ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 14,199 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಸಕ್ರೀಯ ಪ್ರಕರಣಗಳ ಸಂಖ್ಯೆ ಕೂಡ 1,50,055ಕ್ಕೆ ಹೆಚ್ಚಳವಾಗಿದೆ.
ಕಳೆದ 5 ದಿನಕ್ಕೆ ಹೋಲಿಸಿದರೆ ಭಾನುವಾರ ಒಂದೇ ದಿನ (ಫೆ.21) ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಭಾರಿ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ವರದಿಗಳ ಪ್ರಕಾರ 22 ರಾಜ್ಯಗಳಲ್ಲಿ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಶನಿವಾರ (ಫೆ.20) ಯಾವುದೇ ಕೋವಿಡ್ ಸಂಬಂಧಿತ ಸಾವು ಕಂಡುಬಂದಿಲ್ಲ. ಕೇರಳ ಮತ್ತು ಮಹಾರಾಷ್ಟ್ರದಲ್ಲೇ ಅತೀ ಹೆಚ್ಚು ಪ್ರಮಾಣದಲ್ಲಿ (72%) ಸಕ್ರೀಯ ಪ್ರಕರಣಗಳಿವೆ.
ಇದನ್ನೂ ಓದಿ: ಮಧ್ಯಪ್ರದೇಶ: 10 ಅಡಿ ಕೆಳಕ್ಕೆ ಬಿದ್ದ ಮಾಜಿ ಸಿಎಂ ಕಮಲ್ ನಾಥ್ ಪ್ರಯಾಣಿಸುತ್ತಿದ್ದ ಲಿಫ್ಟ್
ಕಳೆದ 24 ಗಂಟೆಗಳಲ್ಲಿ 14,199 ಹೊಸ ಪ್ರಕರಣ ಕಂಡುಬಂದರೆ, 9,695 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 83 ಮಂದಿ ಕೋವಿಡ್ ವೈರಸ್ ಕಾರಣದಿಂದ ಮೃತಪಟ್ಟಿದ್ದಾರೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,10, 05,850ಕ್ಕೆ ಏರಿಕೆಯಾಗಿದೆ. ಒಟ್ಟು 1,06,99,410 ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ. ಮೃತರ ಸಂಖ್ಯೆ 1,56,385. ಸದ್ಯ ದೇಶದಲ್ಲಿರುವ ಸಕ್ರಿಯ ಪ್ರಕರಣಗಳ ಸಂಖ್ಯೆ 1,50,055.
ಮಹಾರಾಷ್ಟ್ರ, ಕೇರಳ ಮಾತ್ರವಲ್ಲದೆ ಮಧ್ಯಪ್ರದೇಶ, ಚತ್ತಿಸ್ ಗಡದಲ್ಲೂ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಪಂಜಾಬ್ ಮತ್ತು ಜಮ್ಮಕಾಶ್ಮೀರದಲ್ಲೂ ಹೊಸ ಪ್ರಕರಣಗಳ ಸಂಖ್ಯೆ ದ್ವಿಗುಣಗೊಂಡಿದೆ.
ಇದನ್ನೂ ಓದಿ: ಫೇಸ್ ಬುಕ್ ಲೈವ್ ಮಾಡುತ್ತಲೇ ಮೈಮರೆತ ಯುವಕರು; ಬೋಟ್ ಮಗುಚಿ ಇಬ್ಬರು ಸಾವು