ಬ್ಯಾಂಕಾಕ್: ಥಾಮಸ್ ಕಪ್ ಇತಿಹಾಸದಲ್ಲೆ ಮೊದಲ ಬಾರಿಗೆ ಭಾರತದ ತಂಡ ಗೆಲುವು ಸಾಧಿಸಿದೆ. ಇಂದು ನಡೆದ ಫೈನಲ್ ಪಂದ್ಯದಲ್ಲಿ 14 ಬಾರಿಯ ಚಾಂಪಿಯನ್ ಇಂಡೋನೇಶ್ಯ ತಂಡವನ್ನು 3-0 ಅಂತರದಿಂದ ಸೋಲಿಸಿ, ಐತಿಹಾಸಿಕ ಸಾಧನೆ ಮಾಡಿದೆ.
ಆರಂಭದಲ್ಲಿ ಲಕ್ಷ್ಯ ಸೇನ್ ಅವರು 8-21, 21-17, 21-16 ಸೆಟ್ ಗಳ ಅಂತರದಿಂದ ಆಂಥೋನಿ ಗಿಂಟಿಂಗ್ ರನ್ನು ಸೋಲಿಸಿ ಭಾರತ ತಂಡಕ್ಕೆ 1-0 ಅಂತರದ ಮುನ್ನಡೆ ಒದಗಿಸಿದರು. ನಂತರ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಅವರು ಮೊಹಮ್ಮದ್ ಅಹ್ಸಾನ್ ಮತ್ತು ಕೆವಿನ್ ಸಂಜಯ ಸುಕಮುಲ್ಜೊ ಅವರನ್ನು 18-21, 23-21, 21-19 ರಿಂದ ಸೋಲಿಸಿದ ನಂತರ ಭಾರತ 2-0 ಮುನ್ನಡೆ ಸಾಧಿಸಿತು.
ಇದನ್ನೂ ಓದಿ:ಉತ್ತರ ಕೊರಿಯಾದಲ್ಲಿ ಮಿತಿಮೀರಿದ ಕೋವಿಡ್; ಮೂರು ದಿನದಲ್ಲಿ 820,620 ಪ್ರಕರಣಗಳು ಪತ್ತೆ!
ಅಂತಿಮ ಪಂದ್ಯದಲ್ಲಿ ಕೆ.ಶ್ರೀಕಾಂತ್ 21-15, 23-21 ನೇರ ಗೇಮ್‌ಗಳಲ್ಲಿ ಜೊನಾಟನ್ ಕ್ರಿಸ್ಟಿ ಅವರನ್ನು ಸೋಲಿಸಿದರು, ಭಾರತ ಯಾವುದೇ ಪಂದ್ಯವನ್ನು ಕಳೆದುಕೊಳ್ಳದೆ ಪ್ರಶಸ್ತಿಗೆ ಮುತ್ತಿಕ್ಕಿತು.
ಇದೇ ಮೊದಲ ಬಾರಿಗೆ ಥಾಮಸ್ ಕಪ್ ಫೈನಲ್ ಪ್ರವೇಶಿಸಿದ ಸಾಧನೆ ಮಾಡಿದ್ದ ಟೀಂ ಇಂಡಿಯಾ, ಮೊದಲ ಯತ್ನದಲ್ಲೇ ಕಪ್ ಗೆದ್ದು ಐತಿಹಾಸಿಕ ದಾಖಲೆ ಬರೆಯಿತು.