ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಯಲ್ಲಿ 12,213 ಕೋವಿಡ್ 19 ಸೋಂಕು ಪ್ರಕರಣ ದೃಢವಾಗಿದ್ದು, ನಿನ್ನೆಗಿಂತ ಶೇ.38.4ರಷ್ಟು ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಫೆಬ್ರವರಿ ನಂತರ ಇದೇ ಮೊದಲ ಬಾರಿಗೆ ಒಂದೇ ದಿನದಲ್ಲಿ ಹತ್ತು ಸಾವಿರದ ಗಡಿ ದಾಟಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ (ಜೂನ್ 16) ಬಿಡುಗಡೆಗೊಳಿಸಿರುವ ಅಂಕಿ-ಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಚಾರ್ಮಾಡಿ ಘಾಟ್‌ನಲ್ಲಿ ಗೂಡ್ಸ್ ವಾಹನ ಪಲ್ಟಿ: ಮೂವರು ಗಂಭೀರ
ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 53,637ಕ್ಕೆ ಏರಿಕೆಯಾಗಿದೆ ಎಂದು ಸಚಿವಾಲಯ ಹೇಳಿದೆ. 24ಗಂಟೆಯ ಅವಧಿಯಲ್ಲಿ 7,624 ಮಂದಿ ಗುಣಮುಖರಾಗಿದ್ದಾರೆ. ಇದರೊಂದಿಗೆ ದೇಶಾದ್ಯಂತ ಕೋವಿಡ್ ನಿಂದ ಈವರೆಗೆ 4,26,74,712 ಮಂದಿ ಚೇತರಿಸಿಕೊಂಡಿದ್ದಾರೆ.
ಪ್ರತಿದಿನದ ಪಾಸಿಟಿವಿಟಿ ದರ ಶೇ.2.35ರಷ್ಟಿದೆ. ವಾರದ ಪಾಸಿಟಿವಿಟಿ ದರ ಶೇ.2.38ರಷ್ಟಿದೆ. ಭಾರತದಲ್ಲಿನ ಚೇತರಿಕೆ ದರ ಶೇ.98.65ರಷ್ಟಿದೆ ಎಂದು ಅಂಕಿಅಂಶ ತಿಳಿಸಿದೆ.
ದೇಶಾದ್ಯಂತದ ಕೋವಿಡ್ ಲಸಿಕೆ ಅಭಿಯಾನದಡಿ ಈವರೆಗೆ 194.67 ಕೋಟಿ ಡೋಸ್ ಲಸಿಕೆ ನೀಡಲಾಗಿದೆ. ಕಳೆದ 24ಗಂಟೆಯಲ್ಲಿ 5,19,419 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ ಎಂದು ಸಚಿವಾಲಯದ ಅಂಕಿಅಂಶದಲ್ಲಿ ವಿವರಿಸಿದೆ.