Advertisement
ಪಾಕಿಸ್ತಾನದ ಬಗ್ಗೆ ಸರ್ಕಾರ ಹೊಂದಿರುವ ನಿರ್ಣಯದ ಬಗ್ಗೆ ಕೇಳಲಾದ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ವಿದೇಶಾಂಗ ಖಾತೆ ಸಹಾಯಕ ಸಚಿವ ವಿ.ಮುರಳೀ ಧರನ್, ಪ್ರಾದೇಶಿಕ, ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಪಾಕಿಸ್ತಾನ ಭಾರತದ ವಿರುದ್ಧ ನಡೆಸುತ್ತಿರುವ ಪ್ರಚೋದನಾಕಾರಿ ಕ್ರಮಗಳ ಬಗ್ಗೆ ಪ್ರಸ್ತಾಪ ಮಾಡಲಾಗುತ್ತಿದೆ.
Related Articles
ಗಿಲ್ಗಿಟ್- ಬಾಲ್ಟಿಸ್ತಾನ್‌ಗಳು ಜಮ್ಮು ಮತ್ತು ಕಾಶ್ಮೀರ, ಲಡಾಖ್ ಕೇಂದ್ರಾಡಳಿತ ಪ್ರದೇಶಕ್ಕೆ ಒಳಪಟ್ಟಿದ್ದು, ದೇಶದ ಅವಿಭಾಜ್ಯ ಅಂಗ ಎಂದು ಭಾರತ ಹೇಳಿಕೊಂಡು ಬರುತ್ತಿದ್ದರೂ, ಪಾಕ್ ಭಿನ್ನರಾಗ ಎತ್ತಿದೆ.
Advertisement
ಗಿಲ್ಗಿಟ್- ಬಾಲ್ಟಿಸ್ತಾನ್‌ಗಳನ್ನು ಪೂರ್ಣ ಪ್ರಮಾಣದ ಪಾಂತ್ಯ ಎಂದು ಘೋಷಿಸಲು ಪಾಕ್ ಸರ್ಕಾರ ಸಕಲ ತಯಾರಿ ಆರಂಭಿಸಿದೆ.ಪಾಕ್ ಆಕ್ರಮಿತ ಗಿಲ್ಗಿಟ್-ಬಾಲ್ಟಿಸ್ತಾನ್‌ಗೆ ಪ್ರಧಾನಿ ಇಮ್ರಾನ್ ಖಾನ್ ಶೀಘ್ರವೇ ಭೇಟಿ ನೀಡಲಿದ್ದಾರೆ.
ಎಲ್ಲ ಸಾಂವಿಧಾನಿಕ ಹಕ್ಕುಗಳನ್ನೊಳಗೊಂಡಂತೆ ಪೂರ್ಣ ಪ್ರಮಾಣದ ಪ್ರಾಂತ್ಯವೆಂದು ಘೋಷಿಸಲಿದ್ದಾರೆ ಎಂದು ಕಾಶ್ಮೀರ ಮತ್ತು ಗಿಲ್ಗಿಟ್- ಬಾಲ್ಟಿಸ್ತಾನ್ ವ್ಯವಹಾರ ಸಚಿವ ಅಲಿ ಅಮಿನ್ ಗಂದಾಪುರ್ ತಿಳಿಸಿದ್ದಾರೆ. ಗಿಲ್ಗಿಟ್- ಬಾಲ್ಟಿಸ್ತಾನ್‌ನ ಬೇಡಿಕೆಗೆ ತಕ್ಕಂತೆ ಆ ಭಾಗದಲ್ಲಿ ರಾಷ್ಟ್ರೀಯ ಅಸೆಂಬ್ಲಿ ಮತ್ತು ಸಂಸದ ಕ್ಷೇತ್ರಗಳನ್ನು ರಚಿಸಲಾಗುತ್ತದೆ. ಸಾಂವಿಧಾನಿಕ ಹಕ್ಕುಗಳ ಅಡಿಯಲ್ಲಿ ಸಮರ್ಪಕ ಪ್ರಾತಿನಿಧ್ಯ ನೀಡಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದಿದ್ದಾರೆ.