Advertisement

ಭಾರತ ಶಿಕ್ಷಣ ರಥಯಾತ್ರೆ ಪ್ರಧಾನಿ ಆಶಯಕ್ಕೆ ಪೂರಕ

09:45 AM Aug 02, 2019 | keerthan |

ಬಂಟ್ವಾಳ: ದೇಶದಲ್ಲಿ ಹೊಸ ಶಿಕ್ಷಣ ನೀತಿ ಜಾರಿಗೆ ಬರುತ್ತಿರುವ ಕಾಲಘಟ್ಟದಲ್ಲಿ ಪ್ರಕಾಶ್‌ ಅಂಚನ್‌ ನೇತೃತ್ವದ ತಂಡವು ಸಮಾನ ಶಿಕ್ಷಣ
ಜಾರಿಗಾಗಿ ಭಾರತ ಶಿಕ್ಷಣ ರಥಯಾತ್ರೆ ನಡೆಸಿರುವುದು ಅರ್ಥಪೂರ್ಣ ವಾಗಿದೆ. ಇದು ಪ್ರಧಾನಿ ಮೋದಿ ಅವರ ಆಶಯಕ್ಕೂ ಪೂರಕವಾಗಿದೆ ಎಂದು ಎಂದು ದಕ್ಷಿಣ ಕನ್ನಡ ಸಂಸದ ನಳಿನ್‌ ಕುಮಾರ್‌ ಕಟೀಲು ಹೇಳಿದರು.

Advertisement

ಅವರು ಗುರುವಾರ ಹೊಸದಿಲ್ಲಿಯ ಜಂತರ್‌ ಮಂತರ್‌ನಲ್ಲಿ ಸರಕಾರಿ ಶಾಲೆ ಉಳಿಸಿ ಬೆಳೆಸಿ ರಾಜ್ಯ ಸಮಿತಿ ಹಾಗೂ ಶ್ರೀ ದುರ್ಗಾ ಚಾರಿಟೆಬಲ್‌ ಟ್ರಸ್ಟ್‌ ಸಹಯೋಗದಲ್ಲಿ “ಒಂದೇ ದೇಶ ಒಂದೇ ಶಿಕ್ಷಣ’ ಜಾರಿಗಾಗಿ ನಡೆದ ಬೃಹತ್‌ ಧರಣಿ ಸತ್ಯಾಗ್ರಹ ಹಾಗೂ ಭಾರತ ಶಿಕ್ಷಣ ರಥಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

ಬಂಟ್ವಾಳದ ಯುವಕರ ತಂಡ ವೊಂದು ಆದರ್ಶ ಶಾಲೆಯನ್ನು ನಿರ್ಮಿಸಿ, ಜಿಲ್ಲೆಯಲ್ಲಿ ಸರಕಾರಿ ಶಾಲೆಯನ್ನು ಉಳಿಸುವ ಪ್ರಯತ್ನ ನಡೆಸಿ ದೇಶಾದ್ಯಂತ ಎಲ್ಲರಿಗೂ ಸಮಾನ ಶಿಕ್ಷಣ ಸಿಗಬೇಕೆಂಬ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶದಿಂದ ಹೊಸದಿಲ್ಲಿಗೆ ಬಂದು ಹೋರಾಟ ನಡೆಸುತ್ತಿರುವುದು ಅಭಿನಂದನೀಯ ಎಂದರು.

ಮೈಸೂರು-ಕೊಡಗು ಸಂಸದ ಪ್ರತಾಪ್‌ಸಿಂಹ ಮಾತನಾಡಿ, ಕೇಂದ್ರ ಸರಕಾರ ಶಿಕ್ಷಣ ಕ್ಷೇತ್ರದ ಸುಧಾರಣೆಗೆ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿ ಸಿದೆ. ಒಂದೇ ಶಿಕ್ಷಣ ನೀತಿ ಜಾರಿ ಬಂದರೆ ಎಲ್ಲರಿಗೂ ಉಪಯೋಗವಾಗಲಿದೆ ಎಂದು ಹೇಳಿದರು.

ಬೀದರ್‌ ಸಂಸದ ಭಗವಾನ್‌ ಕೂಬಾ ಧರಣಿಯಲ್ಲಿ ಪಾಲ್ಗೊಂಡಿದ್ದರು.
ಪ್ರಕಾಶ್‌ ಅಂಚನ್‌ ಮಾತನಾಡಿ, ಆರ್ಥಿಕವಾಗಿ ಹಿಂದುಳಿದ ಕುಟುಂಬ ಗಳ ಮಕ್ಕಳ ವಿದ್ಯಾಭ್ಯಾಸ, ಸರಕಾರಿ ಶಾಲೆಗಳ ಉಳಿವು ಹಾಗೂ ಪ್ರತಿರಾಜ್ಯ ಗಳ ಮಾತೃಭಾಷೆಯೊಂದಿಗೆ ಆಂಗ್ಲ ಹಾಗೂ ಹಿಂದಿ ಭಾಷೆ ಕಲಿಕೆಗೆ ಅವಕಾಶ ನೀಡಬೇಕೆಂದು ಭಾರತ ರಥಯಾತ್ರೆಯನ್ನು ಕೈಗೊಳ್ಳಲಾಗಿತ್ತು. ದೇಶದಲ್ಲಿ ಸಮಾನ ಶಿಕ್ಷಣ ಪದ್ಧತಿಯ ಜಾರಿ ನಮ್ಮ ಆಗ್ರಹವಾಗಿದೆ ಎಂದರು.
ಸರಕಾರಿ ಶಾಲೆ ಉಳಿಸಿ ಬೆಳೆಸಿ ರಾಜ್ಯ ಸಮಿತಿಯ ಪುರುಷೋತ್ತಮ ಅಂಚನ್‌, ಸಂದೀಪ್‌ ಸಾಲ್ಯಾನ್‌, ಮಯೂರಕೀರ್ತಿ, ಜೇಸಿಐ ಬಂಟ್ವಾಳದ ಅಧ್ಯಕ್ಷ ಯತೀಶ್‌ ಕರ್ಕೇರ, ತಾ.ಪಂ. ಸದಸ್ಯ ಗಣೇಶ್‌ ಸುವರ್ಣ, ಭುವನೇಶ್‌ ಪಚ್ಚಿನಡ್ಕ, ಮೊದಲಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಜೇಸಿಐ ಬಂಟ್ವಾಳ, ಹಿಂದೂ ಯುವಶಕ್ತಿ ಆಲಡ್ಕ, ನೇತಾಜಿ ಫೌಂಡೇಶನ್‌ ಚಿಕ್ಕಬಳ್ಳಾಪುರ ಬೆಂಬಲ ವ್ಯಕ್ತಪಡಿಸಿ ಧರಣಿಯಲ್ಲಿ ಪಾಲ್ಗೊಂಡಿತ್ತು.

Advertisement

ಕೇಂದ್ರ ಸಚಿವರಿಗೆ ಮನವಿ
ದೇಶಾದ್ಯಂತ ಮಾತೃಭಾಷೆಯೊಂದಿಗೆ ಇಂಗ್ಲಿಷ್‌ ಹಾಗೂ ಹಿಂದಿ ಶಿಕ್ಷಣ ಕಡ್ಡಾಯ, 1ರಿಂದ 12ನೇ ತರಗತಿವರೆಗೆ ಉಚಿತ ಕಡ್ಡಾಯ ಶಿಕ್ಷಣ, ಸಮಾನ ಶುಲ್ಕ ಹಾಗೂ ಶಿಕ್ಷಣ ಜಾರಿ, ಪ್ರತಿ ರಾಜ್ಯದಲ್ಲೂ ಶಿಕ್ಷಣಕ್ಕಾಗಿ ಶೇ. 25 ಅನುದಾನ ಮೀಸಲು ಮೊದಲಾದ ಬೇಡಿಕೆಗಳ ಮನವಿಯನ್ನು ಕೇಂದ್ರ ಮಾನವ ಸಂಪದ ಸಚಿವ ರಮೇಶ್‌ ಪೋಕ್ರಿಯಾಲ್‌ ಅವರಿಗೆ ನೀಡಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next