ನವ ದೆಹಲಿ : ಮ್ಯಾಂಚೆಸ್ಟರ್ ನಲ್ಲಿ ಇಂದು (ಶುಕ್ರವಾರ) ನಡೆಯಬೇಕಿದ್ದ ಭಾರತ ಮತ್ತು ಇಂಗ್ಲೆಂಡ್ ನಡುವಿನ 5ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯವನ್ನು ರದ್ದುಗೊಳಿಸಲಾಗಿದೆ. ಈ ಬಗ್ಗೆ ಇಂಗ್ಲೆಂಡ್ ಕ್ರಿಕೆಟ್ ಮಂಡಳಿ (ECB) ಶುಕ್ರವಾರ ಪ್ರಕಟಣೆಯಲ್ಲಿ ತಿಳಿಸಿದೆ.
ಗುರುವಾರ ನಡೆಸಿದ ಆರ್‌ಟಿ-ಪಿಸಿಆರ್ ಪರೀಕ್ಷೆಯಲ್ಲಿ ಭಾರತ ತಂಡದ ಆಟಗಾರರ ವರದಿಯು ನೆಗೆಟಿವ್ ಬಂದಿತ್ತು. ಈ ಹಿನ್ನೆಲೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಮತ್ತು ಇಂಗ್ಲೆಂಡ್ ಕ್ರಿಕೆಟ್ ಮಂಡಳಿ (ECB) ನಡುವೆ ಸುದೀರ್ಘ ಚರ್ಚೆ ನಡೆದು ಅಂತಿಮವಾಗಿ ಪಂದ್ಯವನ್ನು ರದ್ದುಗೊಳಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ ಎನ್ನಲಾಗಿದೆ. ಈಗಾಗಲೇ ವಿರಾಟ್ ಕೊಹ್ಲಿ ನೇತೃತ್ವದ ಭಾರತ ತಂಡ 2-1ರ ಸರಣಿ ಮುನ್ನಡೆಯನ್ನು ಪಡೆದುಕೊಂಡಿದೆ.