ನವದೆಹಲಿ: ಕೋವಿಡ್ ನ ನೂತನ ರೂಪಾಂತರ ತಳಿ ಒಮಿಕ್ರಾನ್ ಹಾಗೂ ಕೋವಿಡ್ ಪ್ರಕರಣಗಳ ಹೆಚ್ಚಳದ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ವಿಮಾನ ಸಂಚಾರವನ್ನು ಫೆಬ್ರುವರಿ 28ರವರೆಗೆ ರದ್ದುಗೊಳಿಸಿರುವುದಾಗಿ ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಬುಧವಾರ (ಜನವರಿ 19) ತಿಳಿಸಿದೆ.
ಇದನ್ನೂ ಓದಿ:ಗೋವಾ ಚುನಾವಣೆಗೂ ಸಿಎಂ ಅಭ್ಯರ್ಥಿ ಘೋಷಣೆ ಮಾಡಿದ ಆಪ್
ಏರ್ ಬಬ್ಬಲ್ ಒಪ್ಪಂದ ಹಾಗೂ ವಂದೇ ಭಾರತ್ ಅಭಿಯಾನದಡಿ ಎಲ್ಲಾ ವಿಮಾನ ಹಾರಾಟ ನಡೆಯಲಿದೆ ಎಂದು ತಿಳಿಸಿದೆ. ಅಲ್ಲದೇ ಈ ಹಿಂದಿನ ಒಪ್ಪಂದಂತೆ ಸರಕು ಸಾಗಣೆ ವಿಮಾನ ಹಾರಾಟ ಎಂದಿನಂತೆ ಮುಂದುವರಿಯಲಿದೆ ಎಂದು ಡಿಜಿಸಿಎ ತಿಳಿಸಿದೆ.
ಕೋವಿಡ್ ಮತ್ತು ಒಮಿಕ್ರಾನ್ ಪ್ರಕರಣಗಳ ಹೆಚ್ಚಳದ ಪರಿಣಾಮ ಅಂತಾರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕರ ವಿಮಾನ ಸಂಚಾರದ ನಿರ್ಬಂಧವನ್ನು ಫೆಬ್ರುವರಿ 28ರವರೆಗೆ ವಿಸ್ತರಿಸಲು ನಿರ್ಧರಿಸಲಾಗಿದೆ ಎಂದು ವಿವರಿಸಿದೆ.
ಭಾರತದಲ್ಲಿ ಕಳೆದ 24ಗಂಟೆಯಲ್ಲಿ 2.82ಲಕ್ಷಕ್ಕೂ ಅಧಿಕ ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ. ದೇಶದಲ್ಲಿನ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 8,961ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿತ್ತು.