ಹೊಸದಿಲ್ಲಿ: ನವಿ ಮುಂಬಯಿಯಲ್ಲಿ ರವಿವಾರ ಬಿಸಿಲ ಝಳದಿಂದ 13 ಮಂದಿ ಅಸುನೀಗಿದ ಬೆನ್ನಲ್ಲಿಯೇ ದೇಶದ ವಿವಿಧ ಭಾಗಗಳಲ್ಲಿ ಸೋಮವಾರ 40 ಡಿಗ್ರಿ ಸೆಲ್ಸಿಯಸ್ ಗಿಂತ ಅಧಿಕ ತಾಪಮಾನ ದಾಖಲಾಗಿದೆ. ದೇಶದ ಪೂರ್ವ ಭಾಗದ ಕೆಲವು ಭಾಗಗಳಲ್ಲಿ ಮುಂದಿನ ನಾಲ್ಕು ದಿನಗಳ ಅವಧಿಯಲ್ಲಿ ಬಿಸಿ ಗಾಳಿ ಬೀಸುವ ಸಾಧ್ಯ ತೆಯ ಬಗ್ಗೆ ಭಾರ ತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ನೆಚ್ಚರಿಕೆ ನೀಡಿದೆ.
ವಾಯವ್ಯ ಭಾಗಕ್ಕೆ ಮುಂದಿನ 2 ದಿನಗಳ ಕಾಲ ಎಚ್ಚರಿಕೆಯಿಂದ ಇರುವಂತೆ ಮುನ್ಸೂ ಚನೆ ನೀಡಲಾಗಿದೆ.
ಪಂಜಾಬ್, ಬಿಹಾರ, ಸಿಕ್ಕಿಂ, ಒಡಿಶಾ, ಝಾರ್ಖಂಡ್, ಪಂಜಾಬ್, ಹರಿಯಾಣ, ಉತ್ತರ ಪ್ರದೇಶದ ಪೂರ್ವ ಮತ್ತು ಪಶ್ಚಿಮ ಭಾಗಗಳಲ್ಲಿ ಮುಂದಿನ ನಾಲ್ಕು ದಿನಗಳ ಅವಧಿಯಲ್ಲಿ ಬಿಸಿ ಗಾಳಿ ಬೀಸುವ ಎಚ್ಚರಿಕೆ ನೀಡಲಾಗಿದೆ.
ಹೊಸದಿಲ್ಲಿಯಲ್ಲಿ ಸತತ ಎರಡನೇ ದಿನ ಸೋಮವಾರ ಕೂಡ ಬಿಸಿಗಾಳಿಯಂಥ ವಾತಾವರಣ ನಿರ್ಮಾಣವಾಗಿತ್ತು. ಎ.18 ಮತ್ತು ಎ.19ರಂದು ಲಡಾಖ್, ಹಿಮಾಚಲ ಪ್ರದೇಶ, ಉತ್ತರಾಖಂಡಗಳಲ್ಲಿ ಭಾರಿ ಮಳೆಯಾಗವು ಸಾಧ್ಯತೆ ಇದೆ.
ಮುನ್ನೆಚ್ಚರಿಕೆ: ಬಿಸಿಲ ಝಳ ಹಾಗೂ ಬಿಸಿಗಾಳಿ ಬೀಸುವ ಸಾಧ್ಯತೆಯ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ ಸರಕಾರ 116 ಮಂಡಲಗಳಲ್ಲಿ ಸ್ಥಳೀಯ ನಿವಾಸಿಗಳಿಗೆ ಮುನ್ನೆಚ್ಚರಿಕೆ ನೀಡಲಾಗಿದೆ. ಅನಗತ್ಯವಾಗಿ ಹೊರಕ್ಕೆ ತೆರಳದಂತೆ ಆದೇಶ ನೀಡಲಾಗಿದೆ.