Advertisement
ನಿವಾರ ನಡೆದ ಏಷ್ಯನ್ ಗೇಮ್ಸ್ನ ಆರ್ಚರಿ ಮಹಿಳೆಯರ ಸಂಯುಕ್ತ ವೈಯಕ್ತಿಕ ಸ್ಪರ್ಧೆಯಲ್ಲಿ ಜ್ಯೋತಿ ಸುರೇಖಾ ಚಿನ್ನದ ಪದಕ ಹಾಗೂ ಅದಿತಿ ಸ್ವಾಮಿ ಕಂಚಿನ ಪದಕಕ್ಕೆ ಕೊರೊಳಡ್ಡಿದ್ದಾರೆ. ಮತ್ತೊಂದು ಕಡೆ ಪುರುಷರ ವೈಯಕ್ತಿಕ ಕಾಂಪೌಂಡ್ ಸ್ಪರ್ಧೆಯಲ್ಲಿ ಭಾರತದ ಬಿಲ್ಲುಗಾರ ಓಜಸ್ ಡಿಯೋಟಾಲೆ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾರೆ. ಇನ್ನು ಅಭಿಷೇಕ್ ವರ್ಮಾ ಬೆಳ್ಳಿಯ ಪದಕವನ್ನು ಗೆದ್ದುಕೊಂಡಿದ್ದಾರೆ. ಇದರ ಬೆನ್ನಲ್ಲೇ ಭಾರತದ ಮಹಿಳಾ ಕಬಡ್ಡಿ ತಂಡ ಫೈನಲ್‌ನಲ್ಲಿ ಚಿನ್ನ ಗೆದ್ದುಕೊಂಡಿದೆ.
ಭಾರತಕ್ಕೆ ನೂರನೇ ಪದಕ ಬಂದಿದ್ದು ಮಹಿಳೆಯರ ಕಬಡ್ಡಿಯಿಂದ. ಈ ರೋಚಕ ಪಂದ್ಯದಲ್ಲಿ ಭಾರತ 26-25 ಅಂಕಗಳಿಂದ ಚೈನೀಸ್ ತೈಪೆಯನ್ನು ಸೋಲಿಸಿ ಚಿನ್ನವನ್ನು ಗೆದ್ದು 2023 ರ ಏಷ್ಯನ್ ಗೇಮ್ಸ್‌ನಲ್ಲಿ ಇತಿಹಾಸವನ್ನು ಸೃಷ್ಟಿಸಿತು. ಅಷ್ಟೇ ಅಲ್ಲ ಈ ಮೂಲಕ ಭಾರತಕ್ಕೆ ಏಷ್ಯನ್ ಗೇಮ್ಸ್‌ನಲ್ಲಿ ಇದುವರೆಗೂ 25 ಚಿನ್ನ, ಬೆಳ್ಳಿ 35, 40 ಕಂಚಿನ ಪದಕಗಳು ಲಭಿಸಿದಂತಾಗಿದೆ. ಇನ್ನಷ್ಟು ಚಿನ್ನದ ಪದಕಗಳು ಪದಕ ಪಟ್ಟಿ ಸೇರುವ ಸಾಧ್ಯತೆಗಳೂ ಇವೆ. ಇದನ್ನೂ ಓದಿ: Horoscope: ನಿಮ್ಮ ಸಾಧನೆಗಳು ಸಾಕೆಂಬ ಭಾವನೆ ಬಾರದಿರಲಿ,ಹಲವು ಬಗೆಯ ಪರೀಕ್ಷೆಗಳು ಎದುರಾಗಲಿವೆ
Related Articles
Advertisement