Advertisement

ಭಾರತದ ಅರ್ಥ ವ್ಯವಸ್ಥೆ ಅತ್ಯುತ್ತಮ: ಐಎಂಎಫ್ ಮೆಚ್ಚುಗೆ

12:57 AM Oct 13, 2022 | Team Udayavani |

ವಾಷಿಂಗ್ಟನ್‌: ಜಗತ್ತಿನ ಇತರ ರಾಷ್ಟ್ರಗಳಿಗೆ ಹೋಲಿಕೆ ಮಾಡಿದರೆ, ಭಾರತದ ಅರ್ಥ ವ್ಯವಸ್ಥೆ ಉತ್ತಮವಾಗಿದೆ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಮೆಚ್ಚುಗೆ ವ್ಯಕ್ತಪಡಿಸಿದೆ.

Advertisement

ವಿಶ್ವದ ಉಳಿದ ಭಾಗದಲ್ಲಿ ನಿಧಾನಗತಿಯಲ್ಲಿ ಅರ್ಥ ವ್ಯವಸ್ಥೆ ಬೆಳವಣಿಗೆ ಆಗುತ್ತಿದ್ದರೆ, ಭಾರತದಲ್ಲಿ ಹೆಚ್ಚು ಪ್ರತಿಕೂಲ ಪರಿಣಾಮ ಕಂಡುಬಂದಿಲ್ಲ ವೆಂದು ಐಎಂಎಫ್ ನ ಏಷ್ಯಾ ಮತ್ತು ಪೆಸಿಫಿಕ್‌ ವಿಭಾಗದ ನಿರ್ದೇಶಕ ಕೃಷ್ಣ ಶ್ರೀನಿವಾಸನ್‌ ಪ್ರತಿಪಾದಿಸಿದ್ದಾರೆ.

“ಪಿಟಿಐ’ಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅವರು, ಜಗತ್ತಿನ ಎಲ್ಲಾ ದೇಶಗಳ ಅರ್ಥ ವ್ಯವಸ್ಥೆ ನಿಧಾನಗತಿಯಲ್ಲಿಯೇ ಇದೆ. ಏಷ್ಯಾ ಮತ್ತು ಪೆಸಿಫಿಕ್‌ ವಿಭಾಗದ ರಾಷ್ಟ್ರಗಳಿಗೆ ಹೋಲಿಕೆ ಮಾಡಿದರೆ ಭಾರತದ ಅರ್ಥ ವ್ಯವಸ್ಥೆ ಉತ್ತಮವಾಗಿದೆ. ಹಣದುಬ್ಬರ ನಿಯಂತ್ರಣಕ್ಕೆ ಆರ್‌ಬಿಐ ಕೈಗೊಂಡಿರುವ ಕ್ರಮಗಳು ಸಕಾಲಿಕವೇ ಆಗಿದೆ ಎಂದರು.

ಬಡವರು ಮತ್ತು ಸಮಾಜದ ಇತರ ವರ್ಗಗಳಿಗೆ ಹಣದುಬ್ಬರದ ಪ್ರತಿಕೂಲ ಪರಿಣಾಮ ಬೀರದಂತೆ ಭಾರತ ಸರಕಾರ ಹಲವು ಕ್ರಮಗಳನ್ನು ಕೈಗೊಂಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ತೈಲೋತ್ಪನ್ನಗಳ ಮೇಲೆ ಅಬಕಾರಿ ಸುಂಕ ಕಡಿಮೆ ಮಾಡಿರುವುದು ಇದಕ್ಕೆ ಅತ್ಯುತ್ತಮ ಉದಾಹರಣೆ ಎಂದರು.

ಡಿಜಿಟಲೀಕರಣದ ನಿಟ್ಟಿನಲ್ಲಿ ಭಾರತದಲ್ಲಿ ಉತ್ತಮ ಪ್ರಗತಿ ಸಾಧಿಸಲಾಗಿದೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next