Advertisement

US: ಭಾರತದ್ದು ಅಸಾಧಾರಣ ಯಶಸ್ಸಿನ ಕಥೆ: ಅಮೆರಿಕದ ವಿದೇಶಾಂಗ ಸಚಿವ ಆ್ಯಂಟನಿ ಬ್ಲಿಂಕನ್‌

10:16 PM Jan 17, 2024 | Team Udayavani |

ದಾವೋಸ್‌: ಭಾರತದ್ದು ಒಂದು ಅಸಾಧಾರಣ ಯಶಸ್ಸಿನ ಕಥೆ. ಪ್ರಧಾನಿ ನರೇಂದ್ರ ಮೋದಿ ಅವರ ನೀತಿಗಳು ಮತ್ತು ಯೋಜನೆಗಳು ಭಾರತದ ಜನರಿಗೆ ಹೆಚ್ಚು ಪ್ರಯೋಜನಕಾರಿಯಾಗಿದೆ ಎಂದು ಅಮೆರಿಕದ ವಿದೇಶಾಂಗ ಸಚಿವ ಆ್ಯಂಟನಿ ಬ್ಲಿಂಕನ್‌ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Advertisement

ದಾವೋಸ್‌ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ವೇದಿಕೆಯ ವಾರ್ಷಿಕ ಸಮಾವೇಶದಲ್ಲಿ ಮಾತನಾಡಿದ ಅವರು, “ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ಮತ್ತು ಪ್ರಧಾನಿ ಮೋದಿ ನಡುವೆ ಅತ್ಯುತ್ತಮ ಸಂಬಂಧವಿದೆ. ಮೋದಿ ಅವರ ನೇತೃತ್ವದಲ್ಲಿ ಮೂಲಭೂತ ಸೌಕರ್ಯ ಸೇರಿದಂತೆ ಭಾರತದ ಆರ್ಥಿಕತೆ ತೀವ್ರವಾಗಿ ಬೆಳವಣಿಗೆ ಕಾಣುತ್ತಿದೆ” ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next