Advertisement

15 ವರ್ಷಗಳಲ್ಲಿ ಭಾರತ ಆಗಲಿದೆ 3ನೇ ಅತಿದೊಡ್ಡ ಅರ್ಥ ವ್ಯವಸ್ಥೆ 

12:30 AM Feb 22, 2019 | Team Udayavani |

ಸಿಯೋಲ್‌: ಮುಂದಿನ 15 ವರ್ಷಗಳಲ್ಲಿ ವಿಶ್ವದ ಪ್ರಮುಖ ಮೂರನೇ ಆರ್ಥಿಕತೆಯಾಗಿರಲಿದೆ ಎಂದು 2 ದಿನಗಳ ಉತ್ತರ ಕೊರಿಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅಲ್ಲದೆ ಶೀಘ್ರದಲ್ಲೇ ಭಾರತವು 3.5 ಲಕ್ಷ ಕೋಟಿ ರೂ. ಆರ್ಥಿಕತೆಯಾಗಿ ಹೊರಹೊಮ್ಮಲಿದೆ ಎಂದು ಅವರು ಹೇಳಿದ್ದಾರೆ. ಸಿಯೋಲ್‌ನಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಮಾತನಾಡಿದ ಅವರು, ಇತ್ತೀಚಿನ ವರ್ಷಗಳಲ್ಲಿ ದೇಶದ ಆರ್ಥಿಕತೆಯನ್ನು ಸುಧಾರಿಸುವುದಕ್ಕಾಗಿ ಹಲವು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಇದರ ಫ‌ಲವಾಗಿ ಭಾರತ ಅತ್ಯಂತ ವೇಗವಾಗಿ ಪ್ರಗತಿ ಕಾಣುತ್ತಿದೆ ಎಂದಿದ್ದಾರೆ. ಎರಡು ದಿನಗಳ ಪ್ರವಾಸಕ್ಕಾಗಿ ದಕ್ಷಿಣ ಕೊರಿಯಾಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ, ದಕ್ಷಿಣ ಕೊರಿಯಾ ಅಧ್ಯಕ್ಷ ಮೂನ್‌ ಜಾಯೆ ಇನ್‌ ಜೊತೆ ಶುಕ್ರವಾರ ಮಾತುಕತೆ ನಡೆಸಲಿದ್ದಾರೆ. ಅಲ್ಲದೆ ಸಿಯೋಲ್‌ ಶಾಂತಿ ಪುರಸ್ಕಾರವನ್ನೂ ಮೋದಿ ಸ್ವೀಕರಿಸಲಿದ್ದಾರೆ.

Advertisement

ಮಹಾತ್ಮ ಗಾಂಧಿ ಪುತ್ಥಳಿ ಅನಾವರಣ: ದಕ್ಷಿಣ ಕೊರಿಯಾದ ಪ್ರತಿಷ್ಠಿತ ಯೋನ್ಸೆ„ ವಿಶ್ವವಿದ್ಯಾಲಯದಲ್ಲಿ ಮಹಾತ್ಮ ಗಾಂಧಿ ಪುತ್ಥಳಿಯನ್ನು  ಪ್ರಧಾನಿ ಮೋದಿ ಹಾಗೂ ಅಧ್ಯಕ್ಷ ಮೂನ್‌ ಅನಾವರಣಗೊಳಿಸಿದ್ದಾರೆ. ಈ ವೇಳೆ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಬಾನ್‌ ಕಿ ಮೂನ್‌ ಕೂಡ ಹಾಜರಿದ್ದರು. ಗಾಂಧಿ ಚಿಂತನೆಗಳು ಏಷ್ಯಾ ಹಾಗೂ ಇತರ ಭಾಗಗಳಿಗೂ ಪಸರಿಸಬೇಕು ಎಂದು ದ.ಕೊರಿಯಾ ಅಧ್ಯಕ್ಷ ಮೂನ್‌ ಜಾಯೆ ಇನ್‌ ಹೇಳಿದ್ದಾರೆ.
 

Advertisement

Udayavani is now on Telegram. Click here to join our channel and stay updated with the latest news.

Next