ಹೊಸದಿಲ್ಲಿ: ಪ್ರಮುಖ ಜಾಗತಿಕ ಸಮಸ್ಯೆಗಳ ಹೊರತಾಗಿಯೂ ಭಾರತ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯನ್ನು ಹೊಂದುತ್ತಿದೆ. ಅದಕ್ಕೆ ಕಾರಣ ಪ್ರಜಾಪ್ರಭುತ್ವ. ಭಾರತ ಪ್ರಜಾಪ್ರಭುತ್ವದ ಪರಿಕಲ್ಪನೆಗೆ ತಾಯಿ ಇದ್ದಂತೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದ್ದಾರೆ.
Advertisement
ದಕ್ಷಿಣ ಕೊರಿಯದ ಅಧ್ಯಕ್ಷರಾದ ಯೂನ್ ಸುಕ್ ಇಯೋಲ್ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ಬೆಳವಣಿಗೆ ಹಾಗೂ ಸಮೃದ್ಧಿ ಹಂಚಿಕೆಯಲ್ಲಿ ಪ್ರಜಾಪ್ರಭುತ್ವದ ಪಾತ್ರ ಎನ್ನುವ ಕುರಿತ ಜಾಗತಿಕ ನಾಯಕರ ವಚ್ಯುವಲ್ ಶೃಂಗಸಭೆಯಲ್ಲಿ ಮೋದಿ ಭಾಗಿಯಾಗಿದ್ದರು.