Advertisement

India ಎಂಬುದು ಇಂಗ್ಲಿಷರು ಕರೆದಿರುವ ಹೆಸರು ಅದಕ್ಕೆ ಮಹತ್ವ ಇಲ್ಲ: ಆರಗ ಜ್ಞಾನೇಂದ್ರ

10:42 AM Sep 06, 2023 | Kavyashree |

ತೀರ್ಥಹಳ್ಳಿ: ಇಂಡಿಯಾ ಎಂಬ ಹೆಸರಿನ ಬಗ್ಗೆ ಬಾರಿ ವಿವಾದ ಹಾಗೂ ಚರ್ಚೆಯಾಗುತ್ತಿದೆ. ಇಂಡಿಯಾ ಎನ್ನುವ ಹೆಸರಿಗೆ ಯಾವ ಹಿನ್ನಲೆಯೂ ಇಲ್ಲ. ಇಂಡಸ್ ವ್ಯಾಲ್ಯೂ ಇರುವ ಕಾರಣಕ್ಕೆ ಇಂಡಿಯಾ ಎಂಬ ಹೆಸರು ಬಂದಿದೆ. ಭಾರತ ಎಂದು ಉಚ್ಚಾರ ಮಾಡಲು ಬರದೇ ಇರುವ ಇಂಗ್ಲಿಷರು ಕರೆದಿರುವ ಹೆಸರು. ಅದಕ್ಕೆ ಮಹತ್ವ ಇಲ್ಲ ಎಂದು ಮಾಜಿ ಗೃಹ ಸಚಿವ, ಶಾಸಕ ಆರಗ ಜ್ಞಾನೇಂದ್ರ ಹೇಳಿದರು.

Advertisement

ದೇಶದ ಹೆಸರು ಬದಲಾವಣೆ ವಿಚಾರವಾಗಿ ಮಾತನಾಡಿರುವ ಅವರು ಇಂಗ್ಲಿಷರ ಹಾಗೂ ಮೊಘಲರ ಕಾಲದಲ್ಲಿ ಪರಿವರ್ತನೆ ಆಗಿತ್ತೋ ಅದನ್ನು ಸರಿಪಡಿಸುವುದಕ್ಕೆ ಹಾಗೂ ಸಾಂಸ್ಕೃತಿಕ ಭಾರತ ಎದ್ದೇಳಲು ಇಂದು ಚರ್ಚೆಯಾಗುತ್ತಿದೆ. ಈಗಾಗಲೇ ಹಲವು ಊರಿನ ಹೆಸರು ಬದಲಾವಣೆ ಆಗಿದೆ. ಮದ್ರಾಸ್ ಈಗ ಚನ್ನೈ, ಬೆಂಗಳೂರ್ ಹೋಗಿ ಬೆಂಗಳೂರು, ಕೂರ್ಗ್ ಹೋಗಿ ಕೊಡಗು ಆಗಿದೆ, ಕಾರಣ ಹೆಸರಿನಲ್ಲಿ ಭಾವನಾತ್ಮಕತೆ ಇದೆ ಎಂದರು.

ನಾವು ಭಾರತ್ ಮಾತ ಕಿ ಜೈ ಎನ್ನುತ್ತೇವೆ ಹೊರತು ಇಂಡಿಯಾ ಮಾತ ಕಿ ಜೈ ಎನ್ನುವುದಿಲ್ಲ. ಹಾಗಾಗಿ ಸರ್ಕಾರ ಹೆಸರು ಬದಲಾವಣೆ ಮಾಡುವುದು ಖಂಡಿತ ಒಳ್ಳೆಯದು. ಈ ದೇಶ ಪರದೇಶಿ ಅಲ್ಲ, ಧರ್ಮಛತ್ರ ಅಲ್ಲ. ನಮ್ಮ ಪರಂಪರೆಯಲ್ಲಿ ಬಂದಿರುವ ಹೆಸರು. ಭಾರತ ಎಂಬ ಹೆಸರನ್ನು ಇಟ್ಟರೆ ದೇಶದ ವಿಷಯದಲ್ಲಿ ಭಾವನೆಗಳು ಬೆಳೆಯುತ್ತವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next