ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಯಲ್ಲಿ 1,007 ಕೋವಿಡ್ 19 ಸೋಂಕು ಪ್ರಕರಣ ಪತ್ತೆಯಾಗಿದ್ದು, 26 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ (ಏಪ್ರಿಲ್ 14) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಪ್ರಾಥಮಿಕ ತನಿಖೆ ಆಗುವವರೆಗೂ ಈಶ್ವರಪ್ಪ ರಾಜೀನಾಮೆ ಪಡೆಯಲ್ಲ: ಸಿಎಂ ಬೊಮ್ಮಾಯಿ
ದೇಶಾದ್ಯಂತ ಈವರೆಗೆ ಕೋವಿಡ್ 19 ಸೋಂಕಿನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,21,736ಕ್ಕೆ ಏರಿಕೆಯಾಗಿದೆ. ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 11,058ಕ್ಕೆ ಇಳಿಕೆಯಾಗಿದೆ.
24 ಗಂಟೆಯಲ್ಲಿ 19 ಸಕ್ರಿಯ ಕೋವಿಡ್ 19 ಸೋಂಕು ಪ್ರಕರಣ ಇಳಿಕೆಯಾಗಿದೆ. ಒಂದೇ ದಿನದಲ್ಲಿ 818 ಮಂದಿ ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಇದರೊಂದಿಗೆ ಭಾರತದಲ್ಲಿ ಕೋವಿಡ್ 19 ಸೋಂಕಿನಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 4,25,06,228ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಕೋವಿಡ್ 19 ಚೇತರಿಕೆ ಪ್ರಮಾಣ 98.76ರಷ್ಟಿದೆ. ಪ್ರತಿದಿನದ ಪಾಸಿಟಿವಿಟಿ ದರ ಶೇ.0.23ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ.0.25ರಷ್ಟಿದೆ ಎಂದು ಸಚಿವಾಲಯ ಅಂಕಿಅಂಶದಲ್ಲಿ ತಿಳಿಸಿದೆ.