Advertisement

ಭಾರತದಲ್ಲಿ 24ಗಂಟೆಯಲ್ಲಿ 1,109 ಕೋವಿಡ್ ಪ್ರಕರಣ ಪತ್ತೆ, 43 ಮಂದಿ ಸಾವು

11:00 AM Apr 08, 2022 | Team Udayavani |

ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಯಲ್ಲಿ 1,109 ಕೋವಿಡ್ 19 ಸೋಂಕು ಪ್ರಕರಣ ಪತ್ತೆಯಾಗಿದ್ದು, 43 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ (ಏಪ್ರಿಲ್ 08) ಬಿಡುಗಡೆ ಮಾಡಿರುವ ಅಂಕಿ ಅಂಶದಲ್ಲಿ ತಿಳಿಸಿದೆ.

Advertisement

ಇದನ್ನೂ ಓದಿ:ರೆಪೋ, ರಿವರ್ಸ್ ರೆಪೋ ದರ ಯಥಾಸ್ಥಿತಿ ಮುಂದುವರಿಕೆ; ಶೇ.7.2 ಜಿಡಿಪಿ ನಿರೀಕ್ಷೆ: ಆರ್ ಬಿಐ

ದೇಶದಲ್ಲಿ ಈವರೆಗೆ ಕೋವಿಡ್ 19 ಸೋಂಕು ಪ್ರಕರಣಗಳ ಒಟ್ಟು ಸಂಖ್ಯೆ 4,30,33,067ಕ್ಕೆ ಏರಿಕೆಯಾಗಿದೆ. ಭಾರತದಲ್ಲಿ ಕೋವಿಡ್ 19 ಸೋಂಕಿನಿಂದ ಸಾವನ್ನಪ್ಪಿರುವವರ ಸಂಖ್ಯೆ 5,21,492ಕ್ಕೆ ತಲುಪಿದೆ.

ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 11,492ಕ್ಕೆ ಇಳಿಕೆಯಾಗಿದೆ. ಒಂದೇ ದಿನದಲ್ಲಿ ದೇಶದಲ್ಲಿ 1,213 ಮಂದಿ ಕೋವಿಡ್ 19 ಸೋಂಕಿನಿಂದ ಗುಣಮುಖರಾಗಿದ್ದಾರೆ. 24 ಗಂಟೆಗಳ ಅವಧಿಯಲ್ಲಿ 147 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ.

ದೇಶದ ಕೋವಿಡ್ 19 ಚೇತರಿಕೆ ಪ್ರಮಾಣ ಶೇ.98.78ರಷ್ಟಿದೆ. ಪ್ರತಿದಿನ ಪಾಸಿಟಿವಿಟಿ ದರ ಶೇ.0.24ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ.0.23ರಷ್ಟಿದೆ. ದೇಶಾದ್ಯಂತ ಈವರೆಗೆ ಕೋವಿಡ್ 19 ಲಸಿಕೆ ಅಭಿಯಾನದಡಿ 185.38 ಕೋಟಿಗೂ ಅಧಿಕ ಡೋಸ್ ಲಸಿಕೆ ನೀಡಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next