ನವದೆಹಲಿ: ಭಾರತದಲ್ಲಿ ಕೋವಿಡ್ 3ನೇ ಅಲೆ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 1,225 ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿದ್ದು, 28 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ (ಮಾರ್ಚ್ 31) ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ತೈಲ ಬೆಲೆ ಏರಿಕೆ…ಯೋಗ ಗುರು ಬಾಬಾ ರಾಮ್ ದೇವ್ ಭಾರತೀಯರಿಗೆ ನೀಡಿದ ಸಲಹೆ ಓದಿ!
ದೇಶದಲ್ಲಿ ಈವರೆಗೆ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,21,129ಕ್ಕೆ ಏರಿಕೆಯಾಗಿದೆ. ಭಾರತದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇದೀಗ 14,307ಕ್ಕೆ ಇಳಿಕೆಯಾಗಿದೆ.
ಕಳೆದ 24ಗಂಟೆಯ ಅವಧಿಯಲ್ಲಿ 397 ಸಕ್ರಿಯ ಕೋವಿಡ್ ಪ್ರಕರಣ ಇಳಿಕೆಯಾಗಿದೆ. ಒಂದೇ ದಿನದಲ್ಲಿ 1,594 ಮಂದಿ ಕೋವಿಡ್ ನಿಂದ ಗುಣಮುಖರಾಗಿದ್ದು, ಇದರೊಂದಿಗೆ ದೇಶದಲ್ಲಿ ಕೋವಿಡ್ ನಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 4,24,89,004ಕ್ಕೆ ಏರಿಕೆಯಾಗಿದೆ.
ದೇಶಾದ್ಯಂತ ಹಮ್ಮಿಕೊಂಡ ಕೋವಿಡ್ ಲಸಿಕೆ ಅಭಿಯಾನದಲ್ಲಿ ಈವರೆಗೆ 184.06 ಕೋಟಿ ಡೋಸ್ ಲಸಿಕೆ ನೀಡಲಾಗಿದೆ. 24 ಗಂಟೆಯ ಅವಧಿಯಲ್ಲಿ ಸುಮಾರು 6,07,987 ಜನರನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಅಂಕಿಅಂಶ ವಿವರಿಸಿದೆ.