Advertisement

ಭಾರತದಲ್ಲಿ 24ಗಂಟೆಯಲ್ಲಿ 1,270 ಕೋವಿಡ್ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣ ಭಾರೀ ಇಳಿಕೆ

10:25 AM Mar 28, 2022 | Team Udayavani |

ನವದೆಹಲಿ:ಭಾರತದಲ್ಲಿ ಕೋವಿಡ್ 19 ಸೋಂಕು ಪ್ರಕರಣ ಭಾರೀ ಪ್ರಮಾಣದಲ್ಲಿ ಕಡಿಮೆಯಾಗುತ್ತಿದ್ದು, ಕಳೆದ 24ಗಂಟೆಯಲ್ಲಿ 1,270 ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ (ಮಾರ್ಚ್ 28) ಅಂಕಿಅಂಶದಲ್ಲಿ ತಿಳಿಸಿದೆ.

Advertisement

ಇದನ್ನೂ ಓದಿ:ಮರಳು ತುಂಬಿದ ಲಾರಿ ಟಿಪ್ಪರ್‌ ಹಾಯ್ದು ಬಾಲಕ ಸಾವು: ಟಿಪ್ಪರ್‌ಗೆ ಬೆಂಕಿ

ದೇಶದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 15,859ಕ್ಕೆ ಇಳಿಕೆಯಾಗಿದೆ. ಭಾರತದಲ್ಲಿ ಭಾನುವಾರ 1,421 ಕೋವಿಡ್ ಪ್ರಕರಣ ವರದಿಯಾಗಿದ್ದು, 149 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ದೇಶಾದ್ಯಂತ ಈವರೆಗೆ ಕೋವಿಡ್ ನಿಂದ 5,21,004 ಲಕ್ಷ ತಲುಪಿದೆ.

ಮಾರ್ಚ್ 27ರಂದು ದೇಶದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 16,187ಕ್ಕೆ ಇಳಿಕೆಯಾಗಿತ್ತು ಎಂದು ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ವಿವರಿಸಿದೆ.

ಕಳೆದ 24ಗಂಟೆಗಳಲ್ಲಿ 1,826 ಮಂದಿ ಕೋವಿಡ್ ನಿಂದ ಗುಣಮುಖರಾಗಿದ್ದು, ಇದರೊಂದಿಗೆ ದೇಶದಲ್ಲಿ ಈವರೆಗೆ ಕೋವಿಡ್ ನಿಂದ 4,24,82,262 ಮಂದಿ ಚೇತರಿಸಿಕೊಂಡಿದ್ದಾರೆ. ಭಾರತದಲ್ಲಿ ಚೇತರಿಕೆ ಪ್ರಮಾಣ ಶೇ.98.75ರಷ್ಟಿದೆ ಎಂದು ತಿಳಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next