Advertisement

ಭಾರತದಲ್ಲಿ 24ಗಂಟೆಯಲ್ಲಿ 13,216 ಕೋವಿಡ್ 19 ಪ್ರಕರಣ ದೃಢ, 23 ಮಂದಿ ಸಾವು

10:35 AM Jun 18, 2022 | Team Udayavani |

ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಯಲ್ಲಿ 13,216 ಕೋವಿಡ್ 19 ಸೋಂಕು ಪ್ರಕರಣ ದೃಢಪಟ್ಟಿದ್ದು, 24 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ದೇಶಾದ್ಯಂತ ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,24,840ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ(ಜೂನ್ 17) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.

Advertisement

ಇದನ್ನೂ ಓದಿ:ಅಗ್ನಿಪಥ್ ಯೋಜನೆಗೆ ವಿರೋಧ; ಬಿಹಾರ ಬಂದ್, ವಾಹನಗಳಿಗೆ ಬೆಂಕಿ, ಯುಪಿಯಲ್ಲಿ 260 ಮಂದಿ ಬಂಧನ

ಒಂದೇ ದಿನದಲ್ಲಿ ದೇಶದಲ್ಲಿ 5,045 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, ಇದೀಗ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 68,108ಕ್ಕೆ ಏರಿಕೆಯಾಗಿದೆ ಎಂದು ಸಚಿವಾಲಯ ಹೇಳಿದೆ.

24ಗಂಟೆಯಲ್ಲಿ ಕೋವಿಡ್ 19 ಸೋಂಕಿನಿಂದ 8,148 ಮಂದಿ ಗುಣಮುಖರಾಗಿದ್ದು, ದೇಶಾದ್ಯಂತ ಕೋವಿಡ್ ನಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 4,26,90,845ಕ್ಕೆ ಹೆಚ್ಚಳವಾಗಿದೆ. ಭಾರತದಲ್ಲಿನ ಕೋವಿಡ್ 19 ಚೇತರಿಕೆ ದರ ಶೇ.98.63ರಷ್ಟಿದೆ.

ದೇಶದಲ್ಲಿ ಪ್ರತಿದಿನದ ಪಾಸಿಟಿವಿಟಿ ದರ ಶೇ.2.73ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ.2.47ರಷ್ಟಿದೆ. ಭಾರತದಾದ್ಯಂತ ಕೋವಿಡ್ ಲಸಿಕೆ ಅಭಿಯಾನದಡಿ ಈವರೆಗೆ 196 ಕೋಟಿ ಡೋಸ್ ಲಸಿಕೆ ನೀಡಲಾಗಿದೆ ಎಂದು ಅಂಕಿಅಂಶ ವಿವರಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next