Advertisement

24 ಗಂಟೆಯಲ್ಲಿ ದೇಶದಲ್ಲಿ 14,306 ಕೋವಿಡ್ ಸೋಂಕು ಪ್ರಕರಣಗಳು ಪತ್ತೆ

10:59 AM Oct 25, 2021 | Team Udayavani |

ಹೊಸದಿಲ್ಲಿ: ದೇಶದಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ 14,306 ಹೊಸ ಕೋವಿಡ್ ಸೋಂಕು ಪ್ರಕರಣಗಳು ಪತ್ತೆಯಾಗಿದೆ. ರವಿವಾರ ಪತ್ತೆಯಾದ ಪ್ರಕರಣಗಳ ಸಂಖ್ಯೆಗಿಂತ ಶೇ.10ರಷ್ಟು ಪ್ರಕರಣಗಳು ಇಳಿಕೆಯಾಗಿದೆ.

Advertisement

ಕೇಂದ್ರ ಆರೋಗ್ಯ ಇಲಾಖೆ ನೀಡಿದ ಮಾಹಿತಿಯಂತೆ ದೇಶದಲ್ಲಿ ಇದುವರೆಗೆ ಪತ್ತೆಯಾದ ಒಟ್ಟು ಸೋಂಕು ಪ್ರಕರಣಗಳ ಸಂಖ್ಯೆ 3,41,89,774ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆ ಅವಧಿಯಲ್ಲಿ 443 ಮಂದಿ ಕೋವಿಡ್ ಸೋಂಕಿತರು ನಿಧನರಾಗಿದ್ದಾರೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 4,54,712ಕ್ಕೆ ಏರಿಕೆಯಾಗಿದೆ.

ದೇಶದ ಐದು ರಾಜ್ಯಗಳಲ್ಲಿ ಹೆಚ್ಚು ಪ್ರಕರಣಗಳು ಪತ್ತೆಯಾಗಿದೆ. ಕೇರಳದಲ್ಲಿ 8,538 ಪ್ರಕರಣಗಳು, ಮಹಾರಾಷ್ಟ್ರದಲ್ಲಿ 1,410 ಪ್ರಕರಣಗಳು, ತಮಿಳುನಾಡಿನಲ್ಲಿ 1,127 ಪ್ರಕರಣಗಳು, ಪಶ್ಚಿಮ ಬಂಗಾಳದಲ್ಲಿ 989 ಪ್ರಕರಣಗಳು ಮತ್ತು ಒಡಿಶಾದಲ್ಲಿ 447 ಪ್ರಕರಣಗಳು ಪತ್ತೆಯಾಗಿದೆ.

ಇದನ್ನೂ ಓದಿ:ಜಾತಿಗಣತಿ ವರದಿ ಸ್ವೀಕಾರಕ್ಕೆ ಎಚ್‌ಡಿಕೆ ಹಿಂದೇಟು

ಈ ಐದು ರಾಜ್ಯಗಳಲ್ಲೇ ದೇಶದ ಶೇ. 87.45 ಪ್ರಕರಣಗಳು ಪತ್ತೆಯಾಗಿದೆ. ಅದರಲ್ಲೂ ಕೇರಳದಲ್ಲೇ ದೇಶದ ಶೇ.59.68 ರಷ್ಟು ಪ್ರಕರಣಗಳು ಪತ್ತೆಯಾಗಿದೆ. ಕೇರಳದಲ್ಲಿ 363 ಜನರು ಸಾವನ್ನಪ್ಪಿದ್ದರೆ, ಮಹಾರಾಷ್ಟ್ರದಲ್ಲಿ 18 ಮಂದಿ ಸಾವನ್ನಪ್ಪಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next