Advertisement

7 ತಿಂಗಳ ನಂತರ ಭಾರೀ ಇಳಿಕೆ:ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 14,313 ಕೋವಿಡ್ ಪ್ರಕರಣ ಪತ್ತೆ

11:27 AM Oct 12, 2021 | Team Udayavani |

ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 14,313 ಹೊಸ ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿದ್ದು, ಇದು ಕಳೆದ 224 ದಿನಗಳಲ್ಲಿ ವರದಿಯಾದ ಕನಿಷ್ಠ ಸಂಖ್ಯೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ(ಅಕ್ಟೋಬರ್ 12) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.

Advertisement

ಇದನ್ನೂ ಓದಿ:ಗಾನ ಗಂಧರ್ವ, ತೆಂಕು ತಿಟ್ಟಿನ ಅಗ್ರ ಪಂಕ್ತಿಯ ಭಾಗವತ ಪದ್ಯಾಣ ಗಣಪತಿ ಭಟ್ ವಿಧಿವಶ

ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,39,85,920ಕ್ಕೆ ತಲುಪಿದೆ. ಅಲ್ಲದೇ ಕೋವಿಡ್ 19 ಸೋಂಕಿತರ ಚೇತರಿಕೆ ಪ್ರಮಾಣ ಶೇ.98.04ಕ್ಕೆ ಏರಿಕೆಯಾಗಿದೆ ಎಂದು ಅಂಕಿಅಂಶದಲ್ಲಿ ವಿವರಿಸಿದೆ.

ಕಳೆದ 24ಗಂಟೆಗಳಲ್ಲಿ 181 ಮಂದಿ ಕೋವಿಡ್ ನಿಂದ ಸಾವನ್ನಪ್ಪಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 4,50,963ಕ್ಕೆ ತಲುಪಿದೆ. ಕಳೆದ 18 ದಿನಗಳಿಂದ 30,000ಕ್ಕಿಂತ ಕಡಿಮೆ ಸಂಖ್ಯೆಯಲ್ಲಿ ಕೋವಿಡ್ ಪ್ರಕರಣ ವರದಿಯಾಗುತ್ತಿದೆ.

ಸತತ 107 ದಿನಗಳಿಂದ ದಿನಂಪ್ರತಿ 50,000ಕ್ಕಿಂತ ಕಡಿಮೆ ಪ್ರಮಾಣದ ಸೋಂಕು ಪತ್ತೆಯಾಗುತ್ತಿದೆ ಎಂದು ಅಂಕಿಅಂಶದಲ್ಲಿ ವಿವರಿಸಿದೆ. ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 2,14,900ಕ್ಕೆ ಇಳಿಕೆಯಾಗಿದೆ ಎಂದು ಹೇಳಿದೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

More
Next