Advertisement

ಭಾರತದಲ್ಲಿ 24 ಗಂಟೆಯಲ್ಲಿ 15,940 ಕೋವಿಡ್ ಪ್ರಕರಣ ದೃಢ; ಸಕ್ರಿಯ ಕೋವಿಡ್ ಹೆಚ್ಚಳ

10:51 AM Jun 25, 2022 | Team Udayavani |

ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಯಲ್ಲಿ 15,940 ಕೋವಿಡ್ 19 ಸೋಂಕು ಪ್ರಕರಣ ದೃಢಪಟ್ಟಿದ್ದು, ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,33,78,234ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ (ಜೂನ್ 25) ಬಿಡುಗಡೆಗೊಳಿಸಿರುವ ಅಂಕಿ ಅಂಶದಲ್ಲಿ ತಿಳಿಸಿದೆ.

Advertisement

ಇದನ್ನೂ ಓದಿ:ಟಗರು ಹಾಡಿಗೆ ಸ್ಟೆಪ್ ಹಾಕಿದ ಹುಬ್ಬಳ್ಳಿ-ಧಾರವಾಡ ಪಾಲಿಕೆ ಕಮಿಷನರ್

ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 91,779ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ 20 ಮಂದಿ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ್ದಾರೆ. 24 ಗಂಟೆಯಲ್ಲಿ 12,425 ಮಂದಿ ಕೋವಿಡ್ ನಿಂದ ಗುಣಮುಖರಾಗಿದ್ದಾರೆ ಎಂದು ಸಚಿವಾಲಯ ಹೇಳಿದೆ.

ಭಾರತದಲ್ಲಿ ಕೋವಿಡ್ 19 ಸೋಂಕಿನಿಂದ ಈವರೆಗೆ 4,27,61,481 ಮಂದಿ ಚೇತರಿಸಿಕೊಂಡಿದ್ದಾರೆ. 24 ಗಂಟೆಯಲ್ಲಿ 3,495 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ. ದೇಶದಲ್ಲಿ ಕೋವಿಡ್ 19 ಚೇತರಿಕೆ ಪ್ರಮಾಣ ಶೇ.98.58ರಷ್ಟಿದೆ.

ಭಾರತದಾದ್ಯಂತ ಕೋವಿಡ್ ಲಸಿಕೆ ಅಭಿಯಾನದಡಿ ಈವರೆಗೆ 196.94 ಕೋಟಿ ಡೋಸ್ ಲಸಿಕೆ ನೀಡಲಾಗಿದೆ. ಪ್ರತಿದಿನದ ಪಾಸಿಟಿವಿಟಿ ದರ ಶೇ.4.39ಕ್ಕೆ ಏರಿಕೆಯಾಗಿದ್ದು, ವಾರದ ಪಾಸಿಟಿವಿಟಿ ದರ ಶೇ.3.30ರಷ್ಟಿದೆ ಎಂದು ಅಂಕಿಅಂಶದಲ್ಲಿ ವಿವರಿಸಿದೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next