ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಯಲ್ಲಿ 16,047 ಕೋವಿಡ್ 19 ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 54 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ (ಆಗಸ್ಟ್ 10) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಸಿಎಂ ಬದಲಾವಣೆ ಸುದ್ದಿಯ ಮೂಲ ಸ್ವತಃ ಬಿಜೆಪಿಯೇ : ಡಿ.ಕೆ. ಶಿವಕುಮಾರ್
ದೇಶದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 1,28,261ಕ್ಕೆ ತಲುಪಿದೆ. ಮತ್ತೊಂದೆಡೆ ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,26,826ಕ್ಕೆ ಏರಿಕೆಯಾಗಿದೆ ಎಂದು ಸಚಿವಾಲಯ ತಿಳಿಸಿದೆ.
24ಗಂಟೆಯಲ್ಲಿ 19,539 ಮಂದಿ ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಪ್ರತಿದಿನದ ಪಾಸಿಟಿವಿಟಿ ದರ ಶೇ.4.94ಕ್ಕೆ ಹೆಚ್ಚಳವಾಗಿದೆ. ಮಂಗಳವಾರ ಭಾರತದಲ್ಲಿ 12,751 ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿದ್ದು, 42 ಮಂದಿ ಸಾವನ್ನಪ್ಪಿದ್ದರು.
ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ. ಮಂಗಳವಾರ ರಾಜಧಾನಿಯಲ್ಲಿ 2,495 ಕೋವಿಡ್ ಪ್ರಕರಣ ಪತ್ತೆಯಾಗಿತ್ತು. ಸುಮಾರು 180 ದಿನಗಳ ಬಳಿಕ ಕೋವಿಡ್ ನಿಂದ 7 ಮಂದಿ ಸಾವನ್ನಪ್ಪಿದ್ದು, ದೆಹಲಿಯಲ್ಲಿ ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 26,343ಕ್ಕೆ ಏರಿಕೆಯಾಗಿದೆ ಎಂದು ಸಚಿವಾಲಯದ ಅಂಕಿಅಂಶದಲ್ಲಿ ತಿಳಿಸಿದೆ.