ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಯಲ್ಲಿ 16,678 ಕೋವಿಡ್ 19 ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, 42 ಜನರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ದೇಶಾದ್ಯಂತ ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,25,428ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ (ಜುಲೈ 11) ಬಿಡುಗಡೆಗೊಳಿಸಿರುವ ಅಂಕಿ ಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಬೈತಡ್ಕ ಪ್ರಕರಣ: ಅಪಘಾತವೆಂದು ಕರೆ ಮಾಡಿದ್ದು11.52ಕ್ಕೆ, ಆದರೆ ಕಾರು ಬಿದ್ದದ್ದು 12.02ಕ್ಕೆ
ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 1,30, 713ಕ್ಕೆ ಏರಿಕೆಯಾಗಿದೆ. 24ಗಂಟೆಯಲ್ಲಿ 14,629 ಮಂದಿ ಕೋವಿಡ್ ನಿಂದ ಚೇತರಿಸಿಕೊಂಡಿದ್ದಾರೆ. ದೇಶಾದ್ಯಂತ ಈವರೆಗೆ ಕೋವಿಡ್ ಸೋಂಕಿನಿಂದ ಗುಣಮುಖರಾದವರ ಒಟ್ಟು ಸಂಖ್ಯೆ 4,29,83,162ಕ್ಕೆ ಏರಿಕೆಯಾಗಿದೆ ಎಂದು ವರದಿ ವಿವರಿಸಿದೆ.
ಒಂದೇ ದಿನದಲ್ಲಿ 3,662 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ. ಭಾರತದಲ್ಲಿನ ಕೋವಿಡ್ 19 ಚೇತರಿಕೆ ಪ್ರಮಾಣ ಶೇ.98.50ರಷ್ಟಿದೆ.
ದೇಶಾದ್ಯಂತ ಕೋವಿಡ್ 19 ಲಸಿಕೆ ಅಭಿಯಾನದಡಿ ಈವರೆಗೆ 198.88 ಕೋಟಿ ಡೋಸ್ ಲಸಿಕೆ ನೀಡಲಾಗಿದೆ. ಪ್ರತಿದಿನದ ಪಾಸಿಟಿವಿಟಿ ದರ ಶೇ.5.99ಕ್ಕೆ ಏರಿಕೆಯಾಗಿದೆ. ವಾರದ ಪಾಸಿಟಿವಿಟಿ ದರ ಶೇ.4.81ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.