ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಯಲ್ಲಿ 17,092 ಕೋವಿಡ್ 19 ಸೋಂಕು ಪ್ರಕರಣ ದೃಢಪಟ್ಟಿದ್ದು, ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,34,86,326ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ (ಜುಲೈ 02) ಬಿಡುಗಡೆಗೊಳಿಸಿರುವ ಅಂಕಿ ಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ರಾಷ್ಟ್ರೀಯ ಬಿಜೆಪಿ ಕಾರ್ಯಕಾರಣಿ: ಹೈದರಾಬಾದಿಗೆ ತೆರಳಿದ ಸಿಎಂ ಬೊಮ್ಮಾಯಿ
ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 1,09,568ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ ಕೋವಿಡ್ ಸೋಂಕಿನಿಂದ 29 ಜನರು ಸಾವನ್ನಪ್ಪಿದ್ದು, ಇದರೊಂದಿಗೆ ದೇಶಾದ್ಯಂತ ಈವರೆಗೆ ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,25,168ಕ್ಕೆ ಹೆಚ್ಚಳವಾಗಿದೆ.
ಭಾರತದಲ್ಲಿನ ಕೋವಿಡ್ 19 ಚೇತರಿಕೆ ದರ ಶೇ.98.54ರಷ್ಟಿದೆ. 24 ಗಂಟೆಯ ಅವಧಿಯಲ್ಲಿ 2,379 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ. ಪ್ರತಿದಿನದ ಪಾಸಿಟಿವಿಟಿ ದರ ಶೇ.4.14ಕ್ಕೆ ಏರಿಕೆಯಾಗಿದೆ. ವಾರದ ಪಾಸಿಟಿವಿಟಿ ದರ ಶೇ.3.56ರಷ್ಟಿದೆ.
ಕೋವಿಡ್ 19 ಸೋಂಕಿನಿಂದ ಈವರೆಗೆ ಒಟ್ಟು 4,28,51,590 ಜನರು ಗುಣಮುಖರಾಗಿದ್ದಾರೆ. ಸಚಿವಾಲಯದ ಅಂಕಿ ಅಂಶದ ಪ್ರಕಾರ, ದೇಶಾದ್ಯಂತ ಕೋವಿಡ್ ಲಸಿಕೆ ಅಭಿಯಾನದಡಿ 197.84 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.