ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 18, 132 ನೂತನ ಕೋವಿಡ್ 19 ಸೋಂಕು ಪ್ರಕರಣ ಪತ್ತೆಯಾಗಿದ್ದು, ಇದರೊಂದಿಗೆ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಇಳಿಕೆಯಾಗಿದೆ ಎಂದು ಸೋಮವಾರ(ಅಕ್ಟೋಬರ್ 11) ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆಗೊಳಿಸಿರುವ ಅಂಕಿ ಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:‘ಕಿಂಗ್ ಈಸ್ ಬ್ಯಾಕ್..’ ಹಳೇಯ ಖದರ್ ಗೆ ಮರಳಿದ ಮಾಹಿ, ಸಂತಸದಲ್ಲಿ ತೇಲಾಡಿದ ವಿರಾಟ್
ಸಚಿವಾಲಯದ ಅಂಕಿಅಂಶದ ಪ್ರಕಾರ, 18, 132 ಕೋವಿಡ್ ಪ್ರಕರಣ ವರದಿಯಾಗಿದ್ದು, ಇದು ಕಳೆದ 215 ದಿನಗಳ ನಂತರ ಪತ್ತೆಯಾದ ಕನಿಷ್ಠ ಸಂಖ್ಯೆಯಾಗಿದೆ. ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,39,71,607ಕ್ಕೆ ತಲುಪಿದೆ.
ಭಾರತದಲ್ಲಿನ ಕೋವಿಡ್ 19 ಚೇತರಿಕೆ ಪ್ರಮಾಣ ಶೇ.98ಕ್ಕೆ ಏರಿಕೆಯಾಗಿದೆ. ಕೋವಿಡ್ 19 ಸೋಂಕಿನಿಂದ ಸಾವನ್ನಪ್ಪಿರುವವರ ಸಂಖ್ಯೆ 4,50,782ಕ್ಕೆ ಏರಿಕೆಯಾಗಿದೆ. ಕಳೆದ 24ಗಂಟೆಗಳಲ್ಲಿ ಕೋವಿಡ್ ನಿಂದ 193 ಮಂದಿ ಸಾವನ್ನಪ್ಪಿದ್ದರು.
ದೇಶಾದ್ಯಂತ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 2,27,347ಕ್ಕೆ ಇಳಿಕೆಯಾಗಿದ್ದು, ಇದು ಕಳೆದ 209 ದಿನಗಳ ನಂತರದ ಕನಿಷ್ಠ ಸಂಖ್ಯೆಯಾಗಿದೆ. ಕಳೆದ 17 ದಿನಗಳಿಂದ ದೇಶದಲ್ಲಿ 30,000ಕ್ಕಿಂತ ಕಡಿಮೆ ಪ್ರಮಾಣದಲ್ಲಿ ಕೋವಿಡ್ ಪ್ರಕರಣಗಳು ಪತ್ತೆಯಾಗುತ್ತಿದೆ ಎಂದು ವರದಿ ತಿಳಿಸಿದೆ.