Advertisement

ಭಾರತದಲ್ಲಿ 24ಗಂಟೆಯಲ್ಲಿ 19,406 ಕೋವಿಡ್ 19 ಸೋಂಕು ಪ್ರಕರಣ ಪತ್ತೆ, 49 ಸಾವು

10:22 AM Aug 06, 2022 | Team Udayavani |

ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಯಲ್ಲಿ 19,406 ಕೋವಿಡ್ 19 ಸೋಂಕು ಪ್ರಕರಣ ದೃಢಪಟ್ಟಿದ್ದು, ಇದರೊಂದಿಗೆ ದೇಶಾದ್ಯಂತ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,41,26,994ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ (ಆಗಸ್ಟ್ 06) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.

Advertisement

ಇದನ್ನೂ ಓದಿ:ಕೊಟ್ಟಿಗೆಹಾರ : ಮನೆಯ ಹಿಂಭಾಗದಲ್ಲೇ ನೇಣಿಗೆ ಶರಣಾದ ವ್ಯಕ್ತಿ, ಕಾರಣ ನಿಗೂಢ

ದೇಶದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 1,34,793ಕ್ಕೆ ಇಳಿಕೆಯಾಗಿದೆ. ಕೋವಿಡ್ 19 ಸೋಂಕಿನಿಂದ 49 ಮಂದಿ ಸಾವನ್ನಪ್ಪಿದ್ದು, ಭಾರತದಲ್ಲಿ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,26,649ಕ್ಕೆ ತಲುಪಿದೆ.

24ಗಂಟೆಯಲ್ಲಿ 571 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ಒಂದೇ ದಿನದಲ್ಲಿ 19,928 ಮಂದಿ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶಾದ್ಯಂತ ಕೋವಿಡ್ ನಿಂದ ಚೇತರಿಸಿಕೊಂಡವರ ಸಂಖ್ಯೆ 4,34,65,552ಕ್ಕೆ ಏರಿಕೆಯಾಗಿದೆ.

ದೇಶದಲ್ಲಿನ ಕೋವಿಡ್ 19 ಚೇತರಿಕೆ ಪ್ರಮಾಣ ಶೇ.98.50ರಷ್ಟಿದೆ. ಪ್ರತಿದಿನದ ಪಾಸಿಟಿವಿಟಿ ದರ ಶೇ.496ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ.4.63ರಷ್ಟಿದೆ ಎಂದು ಸಚಿವಾಲಯದ ಅಂಕಿ ಅಂಶದಲ್ಲಿ ತಿಳಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next