Advertisement

ಭಾರತದಲ್ಲಿ 24ಗಂಟೆಯಲ್ಲಿ 19,893 ಕೋವಿಡ್ ಸೋಂಕು ಪ್ರಕರಣ ದೃಢ; 53 ಮಂದಿ ಸಾವು

10:40 AM Aug 04, 2022 | Team Udayavani |

ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಯಲ್ಲಿ 19,893 ಕೋವಿಡ್ 19 ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಇದರೊಂದಿಗೆ ದೇಶಾದ್ಯಂತ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,40,87,037ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ (ಆಗಸ್ಟ್ 04) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.

Advertisement

ಇದನ್ನೂ ಓದಿ:ಹೆದ್ದಾರಿಯಲ್ಲಿ ಬಿರುಕು: ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಘನ ಸಂಚಾರಕ್ಕೆ ನಿರ್ಬಂಧ

ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 1,36,478ಕ್ಕೆ ಇಳಿಕೆಯಾಗಿದೆ. ಭಾರತದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 5,26,530ಕ್ಕೆ ತಲುಪಿದೆ. 24ಗಂಟೆಯಲ್ಲಿ ಕೋವಿಡ್ ನಿಂದ 53 ಮಂದಿ ಸಾವನ್ನಪ್ಪಿದ್ದಾರೆ.

ಒಂದೇ ದಿನದಲ್ಲಿ 579 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. 24ಗಂಟೆಯಲ್ಲಿ 20,419 ಮಂದಿ ಕೋವಿಡ್ ನಿಂದ ಚೇತರಿಸಿಕೊಂಡಿದ್ದಾರೆ. ಇದರೊಂದಿಗೆ ದೇಶಾದ್ಯಂತ ಕೋವಿಡ್ ನಿಂದ ಗುಣಮುಖರಾದವರ ಸಂಖ್ಯೆ 4,34,24,029ಕ್ಕೆ ಏರಿಕೆಯಾಗಿದೆ ಎಂದು ಅಂಕಿಅಂಶ ವಿವರಿಸಿದೆ.

ಭಾರತದಲ್ಲಿನ ಕೋವಿಡ್ 19 ಚೇತರಿಕೆ ದರ ಶೇ.98.50ರಷ್ಟಿದೆ. ಪ್ರತಿದಿನದ ಪಾಸಿಟಿವಿಟಿ ದರ ಶೇ.4.94ರಷ್ಟಿದೆ. ವಾರದ ಪಾಸಿಟಿವಿಟಿ ದರ ಶೇ.4.64ರಷ್ಟಿದೆ ಎಂದು ಸಚಿವಾಲಯದ ಅಂಕಿಅಂಶದಲ್ಲಿ ತಿಳಿಸಿದೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next