ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಯಲ್ಲಿ 20,038 ಕೋವಿಡ್ 19 ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 47 ಜನರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,25,604ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ (ಜುಲೈ 15) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಮಣಿಪಾಲ: ಬೆಂಕಿಗಾಹುತಿಯಾದ ಫ್ಯಾಮಿಲಿ ರೆಸ್ಟೋರೆಂಟ್
ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 1,39,073ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ 16,994 ಜನರು ಗುಣಮುಖರಾಗಿದ್ದಾರೆ. ಇದರೊಂದಿಗೆ ದೇಶಾದ್ಯಂತ ಕೋವಿಡ್ ಸೋಂಕಿನಿಂದ ಒಟ್ಟು 4,30,45,350 ಜನರು ಚೇತರಿಸಿಕೊಂಡಿದ್ದಾರೆ.
24ಗಂಟೆಯಲ್ಲಿ 2,997 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ. ದೇಶದಲ್ಲಿ ಕೋವಿಡ್ 19 ಚೇತರಿಕೆ ದರ ಶೇ.98.48ರಷ್ಟಿದೆ. ಭಾರತದಲ್ಲಿನ ಕೋವಿಡ್ ಲಸಿಕೆ ಅಭಿಯಾನದಡಿ ಈವರೆಗೆ 199.47 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.
ದೇಶದಲ್ಲಿ ಪ್ರತಿದಿನದ ಪಾಸಿಟಿವಿಟಿ ದರ ಶೇ.4.44ರಷ್ಟಿದೆ. ವಾರದ ಪಾಸಿಟಿವಿಟಿ ದರ ಶೇ.4.30ರಷ್ಟಿದೆ ಎಂದು ಆರೋಗ್ಯ ಸಚಿವಾಲಯದ ಅಂಕಿಅಂಶದಲ್ಲಿ ವಿವರಿಸಿದೆ.