ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಯಲ್ಲಿ 20,038 ಕೋವಿಡ್ ಸೋಂಕು ಪ್ರಕರಣ ದೃಢಪಟ್ಟಿದ್ದು, 56 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ದೇಶಾದ್ಯಂತ ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,25,660ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ (ಜುಲೈ 16) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಫೋಟೋ ವಿಡಿಯೋ ನಿಷೇಧದ ಆದೇಶ ನನ್ನ ಗಮನಕ್ಕೆ ಬಂದಿರಲಿಲ್ಲ: ಸಿಎಂ ಬೊಮ್ಮಾಯಿ
ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 1,40,760ಕ್ಕೆ ಏರಿಕೆಯಾಗಿದೆ. 24 ಗಂಟೆಯಲ್ಲಿ 18,301 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ಭಾರತದಲ್ಲಿ ಈವರೆಗೆ ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 4,30,63,651ಕ್ಕೆ ತಲುಪಿದೆ.
ಒಂದೇ ದಿನದಲ್ಲಿ 1,687 ಸಕ್ರಿಯ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ. ದೇಶದಲ್ಲಿನ ಕೋವಿಡ್ 19 ಚೇತರಿಕೆ ಪ್ರಮಾಣ ಶೇ.98.48ರಷ್ಟಿದೆ. ಭಾರತದಾದ್ಯಂತ ಹಮ್ಮಿಕೊಂಡಿರುವ ಕೋವಿಡ್ ಲಸಿಕೆ ಅಭಿಯಾನದಲ್ಲಿ ಈವರೆಗೆ 199.71 ಕೋಟಿ ಡೋಸ್ ಲಸಿಕೆ ನೀಡಲಾಗಿದೆ ಎಂದು ಅಂಕಿಅಂಶ ವಿವರಿಸಿದೆ.
ಕೋವಿಡ್ ನಾಲ್ಕನೇ ಅಲೆಯ ಹಿನ್ನೆಲೆಯಲ್ಲಿ ಕೋವಿಡ್ ಬೂಸ್ಟರ್ ಡೋಸ್ ಲಸಿಕೆಯನ್ನು ಪಡೆದುಕೊಳ್ಳುವಂತೆ ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದ್ದು, ಪ್ರತಿದಿನದ ಪಾಸಿಟಿವಿಟಿ ದರ ಶೇ.4.80ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ.4.40ರಷ್ಟಿದೆ.