Advertisement

ಭಾರತದಲ್ಲಿ 24ಗಂಟೆಯಲ್ಲಿ 20,408 ಕೋವಿಡ್ ಸೋಂಕು ಪ್ರಕರಣ ಪತ್ತೆ, 54 ಮಂದಿ ಸಾವು

10:57 AM Jul 30, 2022 | Team Udayavani |

ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಯಲ್ಲಿ 20,408 ಕೋವಿಡ್ 19 ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಇದರೊಂದಿಗೆ ದೇಶಾದ್ಯಂತ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,40,00,139ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ (ಜುಲೈ 30) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.

Advertisement

ಇದನ್ನೂ ಓದಿ:ಮೊದಲ ಅಂತಾರಾಷ್ಟ್ರೀಯ ಪಂದ್ಯವಾಡಿದ ಬಾರ್ಬಡಾಸ್ ವಿರುದ್ಧ ಸೋತ ಪಾಕಿಸ್ಥಾನ

ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 1,43,384ಕ್ಕೆ ತಲುಪಿದೆ. 24 ಗಂಟೆಯಲ್ಲಿ 54 ಮಂದಿ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿರುವುದಾಗಿ ವರದಿ ಹೇಳಿದೆ. ಒಂದೇ ದಿನದಲ್ಲಿ 604 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ.

24ಗಂಟೆಯಲ್ಲಿ 20,958 ಮಂದಿ ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಭಾರತದಲ್ಲಿ ಈವರೆಗೆ ಕೋವಿಡ್ ಸೋಂಕಿನಿಂದ ಗುಣಮುಖರಾದವರ ಒಟ್ಟು ಸಂಖ್ಯೆ 4,33,30,442ಕ್ಕೆ ಏರಿಕೆಯಾಗಿದೆ.

ದೇಶದಲ್ಲಿನ ಕೋವಿಡ್ ಚೇತರಿಕೆ ಪ್ರಮಾಣ ಶೇ.98.48ರಷ್ಟಿದೆ. ಪ್ರತಿದಿನದ ಪಾಸಿಟಿವಿಟಿ ದರ ಶೇ.5.05ಕ್ಕೆ ಏರಿಕೆಯಾಗಿದೆ. ವಾರದ ಪಾಸಿಟಿವಿಟಿ ದರ ಶೇ.4.92ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next