Advertisement

ಭಾರತದಲ್ಲಿ 24ಗಂಟೆಯಲ್ಲಿ 20,409 ಕೋವಿಡ್ 19 ಪ್ರಕರಣ ದೃಢ, 32 ಮಂದಿ ಸಾವು

10:39 AM Jul 29, 2022 | Team Udayavani |

ನವದೆಹಲಿ:ಭಾರತದಲ್ಲಿ 24ಗಂಟೆಯಲ್ಲಿ 20,409 ಕೋವಿಡ್ 19 ಸೋಂಕು ಪ್ರಕರಣಗಳು ದೃಢಪಟ್ಟಿದೆ. ಇದರೊಂದಿಗೆ ದೇಶಾದ್ಯಂತ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,39,79,730ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ (ಜುಲೈ29) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.

Advertisement

ಇದನ್ನೂ ಓದಿ:ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಪೊಲೀಸರ ಬಲೆಗೆ ಬಿದ್ದ ಮತ್ತೋರ್ವ ಆರೋಪಿ

ಸಚಿವಾಲಯದ ಅಂಕಿಅಂಶದ ಪ್ರಕಾರ, ದೇಶದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 1,43,988ಕ್ಕೆ ತಲುಪಿದೆ. 24ಗಂಟೆಯಲ್ಲಿ ಕೋವಿಡ್ ನಿಂದ 32 ಜನರು ಸಾವನ್ನಪ್ಪಿದ್ದು, ದೇಶಾದ್ಯಂತ ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,26,258ಕ್ಕೆ ಏರಿಕೆಯಾಗಿದೆ.

ಒಂದೇ ದಿನದಲ್ಲಿ 2,335 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. 24ಗಂಟೆಯಲ್ಲಿ 22,697 ಮಂದಿ ಕೋವಿಡ್ ನಿಂದ ಚೇತರಿಸಿಕೊಂಡಿದ್ದಾರೆ. ಭಾರತದಲ್ಲಿ ಈವರೆಗೆ ಕೋವಿಡ್ ನಿಂದ ಗುಣಮುಖರಾದವರ ಒಟ್ಟು ಸಂಖ್ಯೆ 4,33,09,484ಕ್ಕೆ ತಲುಪಿದೆ.

ದೇಶದಲ್ಲಿನ ಕೋವಿಡ್ 19 ಚೇತರಿಕೆ ಪ್ರಮಾಣ ಶೇ.98.47ರಷ್ಟಿದೆ. ಪ್ರತಿದಿನ ಪಾಸಿಟಿವಿಟಿ ದರ ಶೇ.5.12ಕ್ಕೆ ಏರಿಕೆಯಾಗಿದೆ. ವಾರದ ಪಾಸಿಟಿವಿಟಿ ದರ ಶೇ.4.82ರಷ್ಟಿದೆ ಎಂದು ಅಂಕಿಅಂಶ ತಿಳಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next