ಹೊಸದಿಲ್ಲಿ: ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 3,33,533 ಹೊಸ ಕೋವಿಡ್ -19 ಪ್ರಕರಣಗಳು ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ಬೆಳಿಗ್ಗೆ 8 ಗಂಟೆಗೆ ನೀಡಿದ ವರದಿಯಲ್ಲಿ ತಿಳಿಸಿದೆ.
ಭಾರತದ ಸಕ್ರಿಯ ಪ್ರಕರಣಗಳ ಸಂಖ್ಯೆ 21,87,205ಗೆ ತಲುಪಿದೆ. ಚೇತರಿಕೆಯ ಪ್ರಮಾಣವು ಪ್ರಸ್ತುತ ಶೇಕಡಾ 93.18 ರಷ್ಟಿದೆ.
ಕಳೆದ 24 ಗಂಟೆಗಳಲ್ಲಿ ಕನಿಷ್ಠ 2,59,168 ಜನರು ಕೋವಿಡ್ -19 ನಿಂದ ಚೇತರಿಸಿಕೊಂಡಿದ್ದಾರೆ, ಒಟ್ಟು ಗುಣಮುಖರಾದವರ ಸಂಖ್ಯೆ 3,65,60,650 ಕ್ಕೆ ತಲುಪಿದೆ.
ದೈನಂದಿನ ಪಾಸಿಟಿವಿಟಿ ದರವು ಶೇಕಡಾ 17.78 ರಷ್ಟಿದ್ದರೆ, ವಾರದ ಪಾಸಿಟಿವಿಟಿ ರೇಟ್ ಶೇಕಡಾ 16.87 ರಷ್ಟಿದೆ. ಕಳೆದ 24 ಗಂಟೆಗಳಲ್ಲಿ 525 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಸರ್ಕಾರದ ಅಂಕಿಅಂಶಗಳು ತಿಳಿಸಿವೆ.
ಇದುವರೆಗೆ ಒಟ್ಟು 71.55 ಕೋಟಿ ಪರೀಕ್ಷೆಗಳನ್ನು ನಡೆಸಲಾಗಿದ್ದು, ಕಳೆದ 24 ಗಂಟೆಗಳಲ್ಲಿ 18,75,533 ಪರೀಕ್ಷೆಗಳನ್ನು ನಡೆಸಲಾಗಿದೆ.
ಇದನ್ನೂ ಓದಿ:ರಾಜ್ಯಾದ್ಯಂತ “ಗ್ರಾಮ ಒನ್’ ಯೋಜನೆ; ಉಡುಪಿ ಸೇರಿ ನಾಲ್ಕು ಜಿಲ್ಲೆ ಆಯ್ಕೆ
ರಾಜ್ಯದಲ್ಲಿ ಶನಿವಾರ 42,470 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದವು. ಇದರಲ್ಲಿ 17,266 ಪ್ರಕರಣಗಳು ಬೆಂಗಳೂರಿನಲ್ಲಿ ಪತ್ತೆಯಾಗಿದೆ. ರಾಜ್ಯದ ಪಾಸಿಟಿವಿಟಿ ದರ ಸದ್ಯ 19.33% ಇದ್ದು, ಸದ್ಯ 3,30,447 ಸಕ್ರಿಯ ಪ್ರಕರಣಗಳಿವೆ.