Advertisement

ಭಾರತದಲ್ಲಿ 24ಗಂಟೆಯಲ್ಲಿ 4,369 ಕೋವಿಡ್ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣ ಭಾರೀ ಇಳಿಕೆ

11:30 AM Sep 13, 2022 | Team Udayavani |

ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಯಲ್ಲಿ 4,369 ಕೋವಿಡ್ 19 ಸೋಂಕು ಪ್ರಕರಣ ದೃಢಪಟ್ಟಿದ್ದು, ಇದರೊಂದಿಗೆ ದೇಶಾದ್ಯಂತ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,45,04,949ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ (ಸೆ.13) ಬಿಡುಗಡೆಗೊಳಿಸಿರುವ ಅಂಕಿ ಅಂಶದಲ್ಲಿ ತಿಳಿಸಿದೆ.

Advertisement

ಇದನ್ನೂ ಓದಿ:ಪಾಕ್ ಜೈಲಿನಲ್ಲಿ ಮೃತಪಟ್ಟಿದ್ದ ಸರಬ್ಜಿತ್ ಸಿಂಗ್ ಪತ್ನಿ ರಸ್ತೆ ಅಪಘಾತದಲ್ಲಿ ಸಾವು

ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 46,347ಕ್ಕೆ ಇಳಿಕೆಯಾಗಿದೆ. 24 ಗಂಟೆಯಲ್ಲಿ 20 ಮಂದಿ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ್ದು, ಭಾರತದಾದ್ಯಂತ ಈವರೆಗೆ ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,28,185ಕ್ಕೆ ತಲುಪಿದೆ.

ಭಾರತದಲ್ಲಿನ ಕೋವಿಡ್ 19 ಚೇತರಿಕೆ ಪ್ರಮಾಣ ಶೇ.98.71ರಷ್ಟಿದೆ. ಒಂದೇ ದಿನದಲ್ಲಿ 829 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ಮೇ 4ರಂದು ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 2 ಕೋಟಿಯ ಗಡಿ ದಾಟಿತ್ತು. 2022ರ ಜನವರಿ 25ರಂದು ಕೋವಿಡ್ ಪ್ರಕರಣಗಳ ಸಂಖ್ಯೆ ನಾಲ್ಕು ಕೋಟಿಗೆ ಏರಿಕೆಯಾಗಿತ್ತು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next