Advertisement

3 ತಿಂಗಳ ಬಳಿಕ ಭಾರೀ ಇಳಿಕೆ; ಭಾರತದಲ್ಲಿ 24ಗಂಟೆಯಲ್ಲಿ 4,417 ಕೋವಿಡ್ ಪ್ರಕರಣ ಪತ್ತೆ

10:59 AM Sep 06, 2022 | Team Udayavani |

ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಯಲ್ಲಿ 4,417 ಕೋವಿಡ್ 19 ಸೋಂಕು ಪ್ರಕರಣ ಪತ್ತೆಯಾಗಿದ್ದು, ಇದು ಕಳೆದ ಮೂರು ತಿಂಗಳಲ್ಲಿ ದಾಖಲಾದ ಕನಿಷ್ಠ ಪ್ರಕರಣವಾಗಿದೆ. ದೇಶಾದ್ಯಂತ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,44,66,862ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ (ಸೆಪ್ಟೆಂಬರ್ 06) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.

Advertisement

ಇದನ್ನೂ ಓದಿ:ಒಂದೇ ದಿನ 64 ವಿಮಾನಗಳನ್ನು ನಿರ್ವಹಣೆ ಮಾಡಿದ ಮಂಗಳೂರು ವಿಮಾನ ನಿಲ್ದಾಣ

ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 52,336ಕ್ಕೆ ಇಳಿಕೆಯಾಗಿದೆ. 24ಗಂಟೆಯಲ್ಲಿ ಕೋವಿಡ್ ನಿಂದ 23 ಮಂದಿ ಸಾವನ್ನಪ್ಪಿದ್ದು, ಇದರೊಂದಿಗೆ ಭಾರತದಲ್ಲಿ ಈವರೆಗೆ ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,28,030ಕ್ಕೆ ತಲುಪಿದೆ.

ಭಾರತದಲ್ಲಿನ ಕೋವಿಡ್ 19 ಚೇತರಿಕೆ ಪ್ರಮಾಣ ಶೇ.98.69ರಷ್ಟಿದೆ. ಒಂದೇ ದಿನದಲ್ಲಿ 1,638 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ಪ್ರತಿದಿನದ ಪಾಸಿಟಿವಿಟಿ ದರ ಶೇ.1.20ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ.2.06ರಷ್ಟಿದೆ.

ದೇಶಾದ್ಯಂತ ಕೋವಿಡ್ 19 ಸೋಂಕಿನಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 4,38,86,496ಕ್ಕೆ ಏರಿಕೆಯಾಗಿದೆ. ಭಾರತದಲ್ಲಿ ಈವರೆಗೆ 213.72 ಕೋಟಿ ಡೋಸ್ ಲಸಿಕೆ ನೀಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next