ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಯಲ್ಲಿ 6,396 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 201 ಮಂದಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ (ಮಾರ್ಚ್ 04) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಬೆತ್ತಲೆ ವಿಡಿಯೋ ಪಡೆದುಕೊಂಡು Blackmail : ಅಪರಿಚಿತರ ಕಾಲ್, ಮೆಸೇಜ್ ಬಗ್ಗೆ ಇರಲಿ ಎಚ್ಚರ !
ದೇಶಾದ್ಯಂತ ಈವರೆಗೆ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,14,589ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ 19 ಸೋಂಕು ಪ್ರಕರಣಗಳ ಸಂಖ್ಯೆ ಒಟ್ಟು 4,29,51,556ಕ್ಕೆ ತಲುಪಿದೆ ಎಂದು ಸಚಿವಾಲಯದ ಮಾಹಿತಿಯಲ್ಲಿ ವಿವರಿಸಿದೆ.
ಭಾರತದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 69,897ಕ್ಕೆ ಇಳಿಕೆಯಾಗಿದೆ. ದಿನಂಪ್ರತಿಯ ಪಾಸಿಟಿವಿಟಿ ದರ ಶೇ.0.69ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ.0.90ರಷ್ಟಿರುವುದಾಗಿ ಅಂಕಿಅಂಶದಲ್ಲಿ ತಿಳಿಸಿದೆ.
Related Articles
ಸತತ 26 ದಿನಗಳಿಂದ ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಒಂದು ಲಕ್ಷಕ್ಕಿಂತ ಕಡಿಮೆ ಪ್ರಮಾಣದಲ್ಲಿ ವರದಿಯಾಗುತ್ತಿದೆ. ಕೋವಿಡ್ 19 ಚೇತರಿಕೆ ಪ್ರಮಾಣ ಶೇ.98.64ರಷ್ಟಿದೆ ಎಂದು ವರದಿ ಹೇಳಿದೆ.