ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಯಲ್ಲಿ 8,813 ಕೋವಿಡ್ 19 ಸೋಂಕು ಪ್ರಕರಣ ದೃಢಪಟ್ಟಿದ್ದು, ಇದರೊಂದಿಗೆ ದೇಶಾದ್ಯಂತ ಕೋವಿಡ್ 19 ಸೋಂಕು ಪ್ರಕರಣಗಳ ಸಂಖ್ಯೆ 4,42,77,194ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ (ಆಗಸ್ಟ್ 16) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಹಿಟ್ ಲಿಸ್ಟ್ ಗೆ ಗೋಲ್ಡನ್ ಗಾಳಿಪಟ-2: ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಂದು ಗೆಲುವು
ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 1,11,252ಕ್ಕೆ ಇಳಿಕೆಯಾಗಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ. 24ಗಂಟೆಯಲ್ಲಿ ಕೋವಿಡ್ ನಿಂದ 29 ಮಂದಿ ಸಾವನ್ನಪ್ಪಿದ್ದರು. ಭಾರತದಲ್ಲಿ ಈವರೆಗೆ ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,27,098ಕ್ಕೆ ಏರಿಕೆಯಾಗಿದೆ.
ಒಂದೇ ದಿನದಲ್ಲಿ 6,256 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ದೇಶದಲ್ಲಿನ ಕೋವಿಡ್ 19 ಚೇತರಿಕೆ ಪ್ರಮಾಣ 98.56ರಷ್ಟಿದೆ. ದೇಶಾದ್ಯಂತ ಕೋವಿಡ್ ನಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 4,36,38,844ಕ್ಕೆ ತಲುಪಿದೆ.
ಪ್ರತಿದಿನದ ಪಾಸಿಟಿವಿಟಿ ದರ ಶೇ.4.15ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ.4.79ರಷ್ಟಿದೆ. ಭಾರತದಲ್ಲಿನ ಕೋವಿಡ್ 19 ಲಸಿಕೆ ಅಭಿಯಾನದಲ್ಲಿ ಈವರೆಗೆ 208.31 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.