Advertisement

ಭಾರತದಲ್ಲಿ 1,68,03 ಕೋವಿಡ್ ಪ್ರಕರಣ ಪತ್ತೆ, ಒಮಿಕ್ರಾನ್ ಸಂಖ್ಯೆ 4,461ಕ್ಕೆ ಏರಿಕೆ

10:26 AM Jan 11, 2022 | Team Udayavani |

ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಯಲ್ಲಿ 1,68,063 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಇದು ಸೋಮವಾರಕ್ಕಿಂತ ಶೇ.6.4ರಷ್ಟು ಇಳಿಕೆಯಾದಂತಾಗಿದೆ. ದೇಶದಲ್ಲಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 4,461ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ(ಜನವರಿ 11) ಬಿಡುಗಡೆಗೊಳಿಸಿರುವ ಅಂಕಿ-ಅಂಶದಲ್ಲಿ ತಿಳಿಸಿದೆ.

Advertisement

ಇದನ್ನೂ ಓದಿ:ಈ ಮಹತ್ವದ ದಾಖಲೆಗೆ ಮೊಹಮ್ಮದ್ ಶಮಿಗೆ ಬೇಕು ಕೇವಲ ಐದು ವಿಕೆಟ್ ಗಳು

ದೇಶದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 8,21,446ಕ್ಕೆ ಏರಿಕೆಯಾಗಿದೆ. 24 ಗಂಟೆಯಲ್ಲಿ ಕೋವಿಡ್ ನಿಂದ 277 ಮಂದಿ ಸಾವನ್ನಪ್ಪಿದ್ದು, ಇದರೊಂದಿಗೆ ಭಾರತದಲ್ಲಿ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,84,213ಕ್ಕೆ ಹೆಚ್ಚಳವಾಗಿದೆ.

ಸೋಮವಾರ ದೇಶದಲ್ಲಿ 1,79,723 ಕೋವಿಡ್ ಪ್ರಕರಣ ಪತ್ತೆಯಾಗಿದ್ದು, ಭಾನುವಾರ 1,59,632 ಕೋವಿಡ್ ಪ್ರಕರಣ ವರದಿಯಾಗಿತ್ತು. ಈ ಮೂಲಕ ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 5,90,611ಕ್ಕೆ ತಲುಪಿತ್ತು.

ಭಾರತದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 4,461ಕ್ಕೆ ಹೆಚ್ಚಳವಾಗಿದೆ. ಒಟ್ಟು 28 ರಾಜ್ಯಗಳಲ್ಲಿ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಕೋವಿಡ್ ನ ನೂತನ ರೂಪಾಂತರ ತಳಿ ಒಮಿಕ್ರಾನ್ ಪತ್ತೆಯಾಗಿದೆ. ಮಹಾರಾಷ್ಟ್ರದಲ್ಲಿ 1,247, ರಾಜಸ್ಥಾನದಲ್ಲಿ 645, ದೆಹಲಿಯಲ್ಲಿ 546, ಕರ್ನಾಟಕದಲ್ಲಿ 479 ಹಾಗೂ ಕೇರಳದಲ್ಲಿ 350 ಪ್ರಕರಣ ವರದಿಯಾಗಿದೆ ಎಂದು ಅಂಕಿಅಂಶ ತಿಳಿಸಿದೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next