Advertisement

ವಿಂಡೀಸ್ ವಿರುದ್ಧ ಮೊದಲ ಏಕದಿನ: ಟಾಸ್ ಗೆದ್ದ ರೋಹಿತ್; ದೀಪಕ್ ಹೂಡಾ ಪದಾರ್ಪಣೆ

01:10 PM Feb 06, 2022 | Team Udayavani |

ಅಹಮದಾಬಾದ್: ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿ ಸೋಲಿನ ಬಳಿಕ ಭಾರತ ತಂಡ ವೆಸ್ಟ್ ಇಂಡೀಸ್ ವಿರುದ್ಧದ ತವರಿನ ಸರಣಿಗೆ ಸಜ್ಜಾಗಿದೆ. ರೋಹಿತ್ ಶರ್ಮಾ ಅವರು ಮೊದಲ ಬಾರಿಗೆ ಪೂರ್ಣ ಪ್ರಮಾಣದ ನಾಯಕನಾಗಿ ತಂಡವನ್ನು ಮುನ್ನಡೆಸುತ್ತಿದ್ದಾರೆ.

Advertisement

ಅಹಮದಾಬಾದ್ ನಲ್ಲಿ ಟಾಸ್ ಗೆದ್ದ ರೋಹಿತ್ ಶರ್ಮಾ ಮೊದಲು ಫೀಲ್ಡಿಂಗ್ ಮಾಡಲು ನಿರ್ಧರಿಸಿದ್ದಾರೆ. ಆಲ್ ರೌಂಡರ್ ದೀಪಕ್ ಹೂಡಾ ಇಂದು ಏಕದಿನ ಕ್ರಿಕೆಟ್ ಗೆ ಪದಾರ್ಪಣೆ ಮಾಡುತ್ತಿದ್ದಾರೆ.

ಇದನ್ನೂ ಓದಿ:ಅಂಡರ್ 19 ವಿಶ್ವಕಪ್ ಗೆದ್ದ ತಂಡಕ್ಕೆ ಬಹುಮಾನ ಘೋಷಿಸಿದ ಬಿಸಿಸಿಐ

ಭಾರತ ಇಂದು 1000ನೇ ಪಂದ್ಯವಾಡುತ್ತಿದೆ. ಇಂದಿನ ಪಂದ್ಯದಲ್ಲಿ ಭಾರತ ತಂಡ ಆರು ಬ್ಯಾಟರ್ ಗಳು ಮತ್ತು ಐದು ಬೌಲರ್ ಗಳ ಕಾಂಬಿನೇಶನ್ ನಲ್ಲಿ ಆಡುತ್ತಿದ್ದಾರೆ.

ತಂಡಗಳು:

Advertisement

ಭಾರತ: ರೋಹಿತ್ ಶರ್ಮಾ (ನಾ) ಇಶಾನ್ ಕಿಶನ್, ವಿರಾಟ್ ಕೊಹ್ಲಿ, ರಿಷಭ್ ಪಂತ್ (ವಿ.ಕೀ), ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಶಾರ್ದೂಲ್ ಠಾಕೂರ್, ವಾಷಿಂಗ್ಟನ್ ಸುಂದರ್, ಯುಜುವೇಂದ್ರ ಚಾಹಲ್, ಪ್ರಸಿಧ್ ಕೃಷ್ಣ, ಮೊಹಮ್ಮದ್ ಸಿರಾಜ್.

ವೆಸ್ಟ್ ಇಂಡೀಸ್: ಬ್ರಾಂಡನ್ ಕಿಂಗ್, ಶಾಯ್ ಹೋಪ್, ಶಮರ್ ಬ್ರೂಕ್ಸ್, ಡ್ಯಾರೆನ್ ಬ್ರಾವೋ, ನಿಕೋಲಸ್ ಪೂರನ್ (ವಿ.ಕೀ), ಕೀರಾನ್ ಪೊಲಾರ್ಡ್ (ನಾ), ಜೇಸನ್ ಹೋಲ್ಡರ್, ಫ್ಯಾಬಿಯನ್ ಅಲೆನ್, ಅಲ್ಜಾರಿ ಜೋಸೆಫ್, ಕೆಮಾರ್ ರೋಚ್, ಅಕೇಲ್ ಹೊಸೈನ್.

Advertisement

Udayavani is now on Telegram. Click here to join our channel and stay updated with the latest news.

Next