ದುಬೈ: ”ಇಂದು ಭಾರತ ಪ್ರಪಂಚದ ಮುಂದೆ ಪರಿಸರ ವಿಜ್ಞಾನ ಮತ್ತು ಆರ್ಥಿಕತೆಯ ನಡುವಿನ ಸಮತೋಲನದ ಅತ್ಯುತ್ತಮ ಉದಾಹರಣೆಯನ್ನು ಪ್ರಸ್ತುತಪಡಿಸಿದೆ” ಎಂದು ಪ್ರಧಾನಿ ನರೇಂದ್ರ ಮೋದಿ ಅವರು (COP33)ವಿಶ್ವ ಹವಾಮಾನ ಶೃಂಗಸಭೆಯಲ್ಲಿ ಶುಕ್ರವಾರ ಹೇಳಿಕೆ ನೀಡಿದ್ದಾರೆ.
”ಭಾರತವು ವಿಶ್ವದ ಜನಸಂಖ್ಯೆಯ 17% ರಷ್ಟಿರುವ ಹೊರತಾಗಿಯೂ, ಜಾಗತಿಕ ಇಂಗಾಲದ ಹೊರಸೂಸುವಿಕೆಗೆ ಅದರ ಕೊಡುಗೆ 4% ಕ್ಕಿಂತ ಕಡಿಮೆಯಾಗಿದೆ. NDC ಗುರಿಗಳನ್ನು ತಲುಪುವ ಹಾದಿಯಲ್ಲಿರುವ ವಿಶ್ವದ ಕೆಲವು ಆರ್ಥಿಕತೆಗಳಲ್ಲಿ ಭಾರತವೂ ಒಂದಾಗಿದೆ” ಎಂದು ಪ್ರಧಾನಿ ಮೋದಿ ಹೇಳಿದರು.
”ಮೊದಲನೆಯದಾಗಿ, ಹವಾಮಾನ ನ್ಯಾಯ, ಹವಾಮಾನ ಹಣಕಾಸು ಮತ್ತು ಹಸಿರು ಸಾಲದಂತಹ ಸಮಸ್ಯೆಗಳಿಗೆ ನಿಮ್ಮ ನಿರಂತರ ಬೆಂಬಲಕ್ಕಾಗಿ ನಾನು ಕೃತಜ್ಞತೆಯನ್ನು ವ್ಯಕ್ತಪಡಿಸಲು ಬಯಸುತ್ತೇನೆ” ಎಂದು ಪ್ರಧಾನಿ ಮೋದಿ ಹೇಳಿದರು.
ಶೃಂಗಸಭೆಯ ಸಮಯದಲ್ಲಿ ಯುಕೆ ಪ್ರಧಾನಿ ರಿಷಿ ಸುನಕ್ ಜತೆ ಉತ್ತಮ ಸಂವಾದ ನಡೆಸಿದೆ. ಬಲವಾದ ಭಾರತ-ಯುಕೆ ಸ್ನೇಹವು ಮುಂದಿನ ಪೀಳಿಗೆಗೆ ಉತ್ತಮ ಭವಿಷ್ಯವನ್ನು ರಚಿಸಲು ಸಹಾಯ ಮಾಡುತ್ತದೆ ಎಂದು ಪ್ರಧಾನಿ ಮೋದಿ ಎಕ್ಸ್ ನಲ್ಲಿ ಫೋಟೋ ಸಮೇತ ಪೋಸ್ಟ್ ಮಾಡಿದ್ದಾರೆ.
“ಸಿಒಪಿ 28 ಶೃಂಗಸಭೆಯಲ್ಲಿ ನನ್ನ ಸ್ನೇಹಿತರಾದ ಯುಕೆ ವಿದೇಶಾಂಗ ಕಾರ್ಯದರ್ಶಿ ಡೇವಿಡ್ ಕ್ಯಾಮರೂನ್ ಮತ್ತು ಯುಕೆ ಮಾಜಿ ಪ್ರಧಾನಿ ಟೋನಿ ಬ್ಲೇರ್ ಅವರನ್ನು ಭೇಟಿಯಾಗಲು ಸಂತೋಷವಾಗಿದೆ ಎಂದು ಪಿಎಂ ಮೋದಿ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್, ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್,ಬಹ್ರೇನ್‌ನ ಹಿಸ್ ಮೆಜೆಸ್ಟಿ ಕಿಂಗ್ ಹಮದ್ ಬಿನ್ ಇಸಾ ಅಲ್ ಖಲೀಫಾ, ಶ್ರೀಲಂಕಾದ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ, ಇಥಿಯೋಪಿಯಾ ಪ್ರಧಾನಿ ಅಬಿ ಅಹ್ಮದ್ ಅಲಿ ಜತೆ ಸಂವಹನ ನಡೆಸಿದರು.
ಭಾರತವು ಇಥಿಯೋಪಿಯಾದೊಂದಿಗಿನ ದೀರ್ಘಕಾಲದ ಸ್ನೇಹವನ್ನು ಗೌರವಿಸುತ್ತದೆ, ಬಲವಾದ ಪರಸ್ಪರ ಸಹಕಾರದಿಂದ ಸಮೃದ್ಧವಾಗಿರುವ ಸಂಬಂಧ ಹೊಂದಿದೆ ಎಂದು ಪ್ರಧಾನಿ ಮೋದಿ ಪೋಸ್ಟ್ ಮಾಡಿದ್ದಾರೆ.