Advertisement

ಹೆದ್ದಾರಿ ಜಾಲದಲ್ಲಿ ಭಾರತಕ್ಕೆ 2ನೇ ಸ್ಥಾನ

01:31 AM Mar 29, 2022 | Team Udayavani |

ಹೊಸದಿಲ್ಲಿ: ಭಾರತವೀಗ, ಅತಿ ದೊಡ್ಡ ಹೆದ್ದಾರಿ ಸಂಪರ್ಕ ಹೊಂದಿರುವ ವಿಶ್ವದ 2ನೇ ರಾಷ್ಟ್ರವಾಗಿ ಭಾರತ ಉದಯಿಸಿರು ವುದಾಗಿ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಹೇಳಿದೆ.

Advertisement

ಈ ಕುರಿತಂತೆ ಟ್ವೀಟ್‌ ಮಾಡಿರುವ ಸಂಸ್ಥೆ, ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ 64 ಲಕ್ಷ ಕಿ.ಮೀ. ವ್ಯಾಪ್ತಿಯ ಹೆದ್ದಾರಿಯನ್ನು ನಿರ್ಮಿಸಲಾಗಿದೆ ಎಂದು ತಿಳಿಸಿದೆ.

ಇದೇ ವೇಳೆ, ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಟ್ವೀಟ್‌ ಮಾಡಿ, “”ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ, ನವೀಕರಣ ಹಾಗೂ ನೂತನ ಹೆದ್ದಾರಿಗಳ ನಿರ್ಮಾಣದ ಪ್ರಮಾಣ ಮೂರು ಪಟ್ಟು ಹೆಚ್ಚಾಗಿದ್ದು, ಈ ಮೂಲಕ ಕೇಂದ್ರ ಸರಕಾರ ಹೊಸ ದಾಖಲೆಯನ್ನು ನಿರ್ಮಿಸಿದೆ ಎಂದು ಹೇಳಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next