ನವದೆಹಲಿ:ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 1,27,952 ನೂತನ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 1,059 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿರುವವರ ಸಂಖ್ಯೆ 5,01,114ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ (ಫೆ.05) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಹಿಂದೂ-ಮುಸ್ಲಿಂ ಭಾವೈಕ್ಯತೆಯ ಕೊಂಡಿ, ಕನ್ನಡದ ಕಬೀರ ಇಬ್ರಾಹಿಂ ಸುತಾರ
24ಗಂಟೆಯಲ್ಲಿ ದೇಶದಲ್ಲಿ 1,03,921 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ಭಾರತದಲ್ಲೀಗ ಸಕ್ರಿಯ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 13,31,648ಕ್ಕೆ ತಲುಪಿದೆ.
ಒಂದೇ ದಿನದಲ್ಲಿ 2,30,814 ಮಂದಿ ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡಿದ್ದು, ದೇಶಾದ್ಯಂತ ಈವರೆಗೆ ಒಟ್ಟು 4,02,47,902 ಮಂದಿ ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಅಂಕಿಅಂಶ ಹೇಳಿದೆ.
ಕೋವಿಡ್ 19 ಚೇತರಿಕೆ ಪ್ರಮಾಣ ಶೇ.95.64ರಷ್ಟಿದೆ. ಪ್ರತಿದಿನದ ಪಾಸಿಟಿವಿಟಿ ದರ ಶೇ.7.98ರಷ್ಟಿದೆ. ವಾರದ ಪಾಸಿಟಿವಿಟಿ ದರ ಶೇ.11.21ರಷ್ಟಿದೆ ಎಂದು ಸಚಿವಾಲಯದ ಅಂಕಿಅಂಶ ತಿಳಿಸಿದೆ.
ಭಾರತದಲ್ಲಿ ಕೋವಿಡ್ 19 ಲಸಿಕೆ ಅಭಿಯಾನದಲ್ಲಿ ಈವರೆಗೆ 168.98 ಕೋಟಿ ಡೋಸ್ ಲಸಿಕೆ ನೀಡಲಾಗಿದೆ. ಅಲ್ಲದೇ 24 ಗಂಟೆಗಳ ಅವಧಿಯಲ್ಲಿ 16,03,856 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ.