ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಯಲ್ಲಿ 1,49,394 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 1072 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5 ಲಕ್ಷಕ್ಕೆ(5,00,055) ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ (ಫೆ.04) ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ನೂರರ ನಿರೀಕ್ಷೆಯಲ್ಲಿ ಚಿತ್ರರಂಗ: ತೆರೆಮರೆಯಲ್ಲಿ ಬಿಡುಗಡೆ ತಯಾರಿ ಜೋರು
24 ಗಂಟೆಯಲ್ಲಿ ದೇಶದಲ್ಲಿ 98,352 ಸಕ್ರಿಯ ಕೋವಿಡ್ ಪ್ರಕರಣ ಇಳಿಕೆಯಾಗಿದೆ. ದೇಶಾದ್ಯಂತ ಒಟ್ಟು ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 14,35,569ಕ್ಕೆ ತಲುಪಿದೆ. ಒಂದೇ ದಿನದಲ್ಲಿ 2,46,674 ಮಂದಿ ಕೋವಿಡ್ ನಿಂದ ಚೇತರಿಸಿಕೊಂಡಿದ್ದಾರೆ. ಭಾರತದಲ್ಲಿ ಈವರೆಗೆ ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 4,00,17,088ಕ್ಕೆ ಏರಿಕೆಯಾಗಿದೆ.
ಕೋವಿಡ್ 19 ಚೇತರಿಕೆ ಪ್ರಮಾಣ ಶೇ.95.39ರಷ್ಟಿದೆ. ಪ್ರತಿದಿನದ ಪಾಸಿಟಿವಿಟಿ ದರ ಶೇ.9.27ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ.12.03ರಷ್ಟಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ಕೋವಿಡ್ 19 ಲಸಿಕೆ ಅಭಿಯಾನದಲ್ಲಿ ದೇಶಾದ್ಯಂತ ಈವರೆಗೆ 168.47 ಕೋಟಿ ಡೋಸ್ ನೀಡಲಾಗಿದ್ದು, 24 ಗಂಟೆಯಲ್ಲಿ 16,11,666 ಮಂದಿಯನ್ನು ಪರೀಕ್ಷಿಸಲಾಗಿದೆ.