ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಯಲ್ಲಿ 1,67,059 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 1,192 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 4,96,242ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ (ಫೆ.01) ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಬೆಳಗಾವಿ: ಆರ್ ಟಿಪಿಸಿಆರ್ ನೆಗೆಟಿವ್ ವರದಿ ಇಲ್ಲದ 41 ಬಸ್ ಪ್ರಯಾಣಿಕರು ವಾಪಸ್ ಮುಂಬೈಗೆ
24ಗಂಟೆಯಲ್ಲಿ 88,209 ಸಕ್ರಿಯ ಕೋವಿಡ್ ಪ್ರಕರಣಗಳು ಇಳಿಕೆಯಾಗಿದೆ. ದೇಶಾದ್ಯಂತ ಸಕ್ರಿಯ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 17,43,059ಕ್ಕೆ ಇಳಿಕೆ ಕಂಡಿದೆ ಎಂದು ಅಂಕಿಅಂಶ ವಿವರಿಸಿದೆ.
ಒಂದೇ ದಿನದಲ್ಲಿ ಕೋವಿಡ್ ಸೋಂಕಿನಿಂದ 2,54,076 ಮಂದಿ ಗುಣಮುಖರಾಗಿದ್ದಾರೆ. ಭಾರತದಲ್ಲಿ ಈವರೆಗೆ ಒಟ್ಟು 3,92,30,198 ಮಂದಿ ಚೇತರಿಸಿಕೊಂಡಿದ್ದಾರೆ. ದೇಶದ ಕೋವಿಡ್ 19 ಚೇತರಿಕೆ ಪ್ರಮಾಣ ಶೇ.94.60ರಷ್ಟಿದೆ.
ದಿನಂಪ್ರತಿಯ ಪಾಸಿಟಿವಿಟಿ ದರ ಶೇ.11.69ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ.15.25ರಷ್ಟಿದೆ ಎಂದು ಸಚಿವಾಲಯ ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ. ದೇಶಾದ್ಯಂತ ಈವರೆಗೆ 166.68 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಿರುವುದಾಗಿ ತಿಳಿಸಿದೆ.