ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 10,302 ನೂತನ ಕೋವಿಡ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, 267 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,44,99,925ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ(ನವೆಂಬರ್ 20) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಜಲಪಾತದ ವಿಡಿಯೋ ತೆಗೆಯುವಾಗ ಕೊಚ್ಚಿ ಹೋದ ಡ್ರೋನ್ ಕ್ಯಾಮರಾ
ದೇಶದಲ್ಲಿ ಈವರೆಗೆ ಕೋವಿಡ್ ಸೋಂಕಿನಿಂದ 4,65,349 ಮಂದಿ ಸಾವನ್ನಪ್ಪಿದ್ದಾರೆ. 24ಗಂಟೆಯಲ್ಲಿ 11,787 ಮಂದಿ ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ದೇಶಾದ್ಯಂತ ಒಟ್ಟು 3,39,09,708 ಮಂದಿ ಕೋವಿಡ್ ನಿಂದ ಗುಣಮುಖರಾಗಿದ್ದಾರೆ ಎಂದು ಅಂಕಿಅಂಶ ಹೇಳಿದೆ.
ಕಳೆದ 24ಗಂಟೆಗಳ ಅವಧಿಯಲ್ಲಿ 1,752 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ದೇಶದಲ್ಲಿ ಕೋವಿಡ್ 19 ಸೋಂಕಿನ ಚೇತರಿಕೆ ಪ್ರಮಾಣ ಶೇ.98.29ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ದಿನಂಪ್ರತಿಯ ಪಾಸಿಟಿವಿಟಿ ದರ ಶೇ.0.96ರಷ್ಟಿದ್ದು, ಇದು ಕಳೆದ 47 ದಿನಗಳಿಂದ ಶೇ.2ಕ್ಕಿಂತ ಕಡಿಮೆ ಪ್ರಮಾಣದಲ್ಲಿದೆ. ವಾರದ ಪಾಸಿಟಿವಿಟಿ ದರ ಶೇ.0.93ರಷ್ಟಿದೆ ಎಂದು ವರದಿ ಹೇಳಿದೆ.