Advertisement

ಭಾರೀ ಇಳಿಕೆ: ಭಾರತದಲ್ಲಿ 24 ಗಂಟೆಯಲ್ಲಿ 1,033 ಕೋವಿಡ್ ಪ್ರಕರಣ ಪತ್ತೆ, 43 ಮಂದಿ ಸಾವು

11:06 AM Apr 07, 2022 | Team Udayavani |

ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಯಲ್ಲಿ 1,033 ಕೋವಿಡ್ 19 ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, 43 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ (ಏಪ್ರಿಲ್ 07) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.

Advertisement

ಇದನ್ನೂ ಓದಿ:24 ಗಂಟೆಯಲ್ಲಿ ದ್ವೀಪರಾಷ್ಟ್ರ ಲಂಕಾಕ್ಕೆ ಭಾರತದಿಂದ 76,000 ಟನ್ ಇಂಧನ ಪೂರೈಕೆ

ದೇಶಾದ್ಯಂತ ಈವರೆಗೆ ಕೋವಿಡ್ 19 ಸೋಂಕಿನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,21,530ಕ್ಕೆ ಏರಿಕೆಯಾಗಿದೆ. ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 11,639ಕ್ಕೆ ಇಳಿಕೆಯಾಗಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

ಕಳೆದ 24ಗಂಟೆಯ ಅವಧಿಯಲ್ಲಿ 232 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ಒಂದೇ ದಿನದಲ್ಲಿ 1,222 ಮಂದಿ ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದಾರೆ. ಇದರೊಂದಿಗೆ ಭಾರತದಲ್ಲಿ ಕೋವಿಡ್ ಸೋಂಕಿನಿಂದ ಗುಣಮುಖರಾದವರ ಒಟ್ಟು ಸಂಖ್ಯೆ 4,24,98,789ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಕೋವಿಡ್ 19 ಚೇತರಿಕೆ ಪ್ರಮಾಣ ಶೇ.98.76ರಷ್ಟಿದೆ. ಪ್ರತಿದಿನದ ಕೋವಿಡ್ ಪಾಸಿಟಿವಿಟಿ ದರ ಶೇ.0.21ರಷ್ಟಿದ್ದು, ವಾರದ ಕೋವಿಡ್ ಪಾಸಿಟಿವಿಟಿ ದರ ಶೇ.0.22ರಷ್ಟಿದೆ ಎಂದು ಅಂಕಿಅಂಶ ತಿಳಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next