ಹೊಸದಿಲ್ಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 11,271 ಹೊಸ ಕೋವಿಡ್ 19 ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಶನಿವಾರ ಪತ್ತೆಯಾದ ಪ್ರಕರಣಗಳಿಗಿಂತ ಶೇ 4.9 ರಷ್ಟು ಕಡಿಮೆ ಪ್ರಕರಣಗಳು ಪತ್ತೆಯಾಗಿದೆ. ಇದರಿಂದ ದೇಶದ ಒಟ್ಟು ಪ್ರಕರಣಗಳ ಸಂಖ್ಯೆ 3,44,37,307 ಕ್ಕೆ ಏರಿಕೆಯಾಗಿದೆ.
ಈ ಅವಧಿಯಲ್ಲಿ 285 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಇದರಿಂದ ದೇಶದಲ್ಲಿ ಇದುವರೆಗೆ ಸಾವನ್ನಪ್ಪಿದ ಸೋಂಕಿತರ ಸಂಖ್ಯೆ 4,63,530 ಕ್ಕೆ ಏರಿಕೆಯಾಗಿದೆ.
ಕೇರಳ ರಾಜ್ಯವೊಂದರಲ್ಲೇ 6,468 ಪ್ರಕರಣಗಳು ಪತ್ತೆಯಾಗಿದ್ದು, ಮಹಾರಾಷ್ಟ್ರದಲ್ಲಿ 999 ಪ್ರಕರಣಗಳು, ಪಶ್ಚಿಮ ಬಂಗಾಳದಲ್ಲಿ 872 ಪ್ರಕರಣಗಳು, ತಮಿಳುನಾಡು ರಾಜ್ಯದಲ್ಲಿ 809 ಪ್ರಕರಣಗಳು ಮತ್ತು ಮಿಜೋರಾಂನಲ್ಲಿ 387 ಕೋವಿಡ್ ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ.
ಇದನ್ನೂ ಓದಿ:ಪ್ರಧಾನಿ ಮೋದಿ ದೇಶವನ್ನು ರಕ್ಷಿಸಲು ಅಸಮರ್ಥ ಎಂದು ಮಣಿಪುರ ದಾಳಿ ತೋರಿಸುತ್ತದೆ: ರಾಹುಲ್
ಈ ಐದು ರಾಜ್ಯಗಳಲ್ಲೇ ದೇಶದ ಶೇ.84.6 ರಷ್ಟು ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ. ಕೇರಳ ರಾಜ್ಯವೊಂದರಲ್ಲೇ ಶೇ. 57.39 ರಷ್ಟು ಸೋಂಕು ಪ್ರಕರಣಗಳು ಪತ್ತೆಯಾಗಿದೆ.
ಕಳೆದ 24 ಗಂಟೆಗಳಲ್ಲಿ ಒಟ್ಟು 11,376 ರೋಗಿಗಳು ಚೇತರಿಸಿಕೊಂಡಿದ್ದಾರೆ, ಇದು ದೇಶಾದ್ಯಂತ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 3,38,37,859 ಕ್ಕೆ ತಲುಪಿದೆ. ಭಾರತದ ಚೇತರಿಕೆಯ ಪ್ರಮಾಣವು ಈಗ 98.26% ರಷ್ಟಿದೆ.