Advertisement

ಭಾರತದಲ್ಲಿ 12,729 ಕೋವಿಡ್ ಸೋಂಕು ಪ್ರಕರಣ ಪತ್ತೆ, ಸಕ್ರಿಯ ಪ್ರಕರಣದಲ್ಲಿ ಹೆಚ್ಚಳ

12:36 PM Nov 05, 2021 | Team Udayavani |

ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ ದಾಖಲೆಯ 12,729 ನೂತನ ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿದ್ದು, 221 ಮಂದಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ(ನವೆಂಬರ್ 05) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.

Advertisement

ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,43,33,754ಲ್ಲೆ ಏರಿಕೆಯಾಗಿದ್ದು, ಕೋವಿಡ್ ಸೋಂಕಿನಿಂದ ಸಾವನ್ನಪ್ಪಿರುವವರ ಸಂಖ್ಯೆ 4,59,873ಕ್ಕೆ ತಲುಪಿದೆ ಎಂದು ಅಂಕಿಅಂಶದಲ್ಲಿ ಹೇಳಿದೆ.

ಕಳೆದ 24ಗಂಟೆಗಳಲ್ಲಿ 12,165 ಮಂದಿ ಕೋವಿಡ್ ನಿಂದ ಚೇತರಿಸಿಕೊಂಡಿದ್ದಾರೆ. ಅಲ್ಲದೇ ಕಳೆದೊಂದು ದಿನದಲ್ಲಿ 343 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 1,48,922ಕ್ಕೆ ತಲುಪಿದೆ.

ಸತತ 28ದಿನಗಳಿಂದ ಪ್ರತಿದಿನ 20,000 ಸಾವಿರಕ್ಕಿಂತ ಕಡಿಮೆ ಪ್ರಮಾಣದಲ್ಲಿ ಪ್ರಕರಣಗಳು ಪತ್ತೆಯಾಗುತ್ತಿದೆ. ಅಷ್ಟೇ ಅಲ್ಲ ಕಳೆದ 131 ದಿನಗಳಿಂದ 50,000 ಸಾವಿರಕ್ಕಿಂತ ಕಡಿಮೆ ಪ್ರಮಾಣ ಪ್ರಕರಣಗಳು ವರದಿಯಾಗುತ್ತಿದೆ ಎಂದು ಅಂಕಿಅಂಶದಲ್ಲಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next