Advertisement

ಭಾರತದಲ್ಲಿ 12,885 ಕೋವಿಡ್ ಸೋಂಕು ಪ್ರಕರಣ ಪತ್ತೆ, 461 ಮಂದಿ ಸಾವು

11:43 AM Nov 04, 2021 | Team Udayavani |

ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 12,885 ನೂತನ ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿನ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,43,21,025ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ(ನವೆಂಬರ್ 05) ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.

Advertisement

ಇದನ್ನೂ ಓದಿ:ಈ ಬಾರಿಯೂ ಸೈನಿಕರೊಂದಿಗೆ ದೀಪಾವಳಿ ಆಚರಿಸಿದ ಪ್ರಧಾನಿ ಮೋದಿ

ದೇಶದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 1,48,579ಕ್ಕೆ ಇಳಿಕೆಯಾಗಿದ್ದು, ಇದು 253 ದಿನಗಳ ಕನಿಷ್ಠ ಪ್ರಮಾಣದ ಸಂಖ್ಯೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.

ಕಳೆದ 24ಗಂಟೆಗಳಲ್ಲಿ ಕೋವಿಡ್ ನಿಂದ 461 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,59,652ಕ್ಕೆ ಏರಿಕೆಯಾಗಿದೆ. ಕಳೆದ 27ದಿನಗಳಿಂದ 20,000 ಸಾವಿರಕ್ಕಿಂತ ಕಡಿಮೆ ಪ್ರಮಾಣದಲ್ಲಿ ಪ್ರಕರಣ ಪತ್ತೆಯಾಗುತ್ತಿದೆ.

ಕಳೆದ 24ಗಂಟೆಗಳಲ್ಲಿ 2630 ಸಕ್ರಿಯ ಪ್ರಕರಣಗಳು ಇಳಿಕೆಯಾಗಿದೆ. ದಿನದ ಪಾಸಿಟಿವಿಟಿ ದರ ಶೇ.1.21ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ.1.17ರಷ್ಟಿದ್ದಿರುವುದಾಗಿ ವರದಿ ತಿಳಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next