ನವದೆಹಲಿ:ಭಾರತದಲ್ಲಿ ಕಳೆದ ಕೆಲವು ದಿನಗಳಿಂದ ಕೋವಿಡ್ 19 ಸೋಂಕು ಪ್ರಕರಣ ಇಳಿಕೆಯಾಗುತ್ತಿದ್ದು, ಕಳೆದ 24ಗಂಟೆಯಲ್ಲಿ 51,667 ಹೊಸ ಪ್ರಕರಣ ಪತ್ತೆಯಾಗಿದ್ದು, 1,329 ಕೋವಿಡ್ 19 ಸೋಂಕಿನಿಂದ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ(ಜೂನ್ 25) ಬಿಡುಗಡೆ ಮಾಡಿರುವ ಅಂಕಿ-ಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಸ್ಯಾಮ್ ಸಂಗ್ ಎಂ 42: ಹೇಗಿದೆ ಎಂ ಸರಣಿಯ ಮೊದಲ 5ಜಿ ಫೋನ್?
ಭಾರತದಲ್ಲಿ ಒಟ್ಟು ಕೋವಿಡ್ 19 ಪ್ರಕರಣಗಳ ಸಂಖ್ಯೆ 3,01,34,445ಕ್ಕೆ ಏರಿಕೆಯಾಗಿದೆ. ಈವರೆಗೆ 3,93,310 ಮಂದಿ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ್ದು, ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 6,12,868ಕ್ಕೆ ಇಳಿಕೆಯಾಗಿದೆ ಎಂದು ಹೇಳಿದೆ.
ಈವರೆಗೆ ದೇಶದಲ್ಲಿ 39,95,68,448 ಮಂದಿಗೆ ಕೋವಿಡ್ 19 ಪರೀಕ್ಷೆ ನಡೆಸಲಾಗಿದೆ. ಜೂನ್ 24ರಂದು 17,35,781 ಜನರ ಕೋವಿಡ್ ಪರೀಕ್ಷೆ ನಡೆಸಲಾಗಿದೆ ಎಂದು ಅಂಕಿಅಂಶ ತಿಳಿಸಿದೆ.
ಏತನ್ಮಧ್ಯೆ ಡೆಲ್ಟಾ ರೂಪಾಂತರ ವಿರುದ್ಧ ಅಮೆರಿಕ ಮೂಲದ ಔಷಧ ಕಂಪನಿಯ ಫೈಜರ್ ಹೆಚ್ಚು ಪರಿಣಾಮಕಾರಿ ಎಂದು ಹೇಳಿದೆ. ಡೆಲ್ಟಾ ರೂಪಾಂತರ ಫೈಜರ್ ಶೇ.90ರಷ್ಟು ಪರಿಣಾಮಕಾರಿ ಎಂದು ಇಸ್ರೇಲ್ ನಲ್ಲಿರುವ ಫೈಜರ್ ವೈದ್ಯಕೀಯ ನಿರ್ದೇಶಕ ಅಲೋನ್ ರಾಪ್ಪೋರ್ಟ್ ತಿಳಿಸಿರುವುದಾಗಿ ವರದಿ ಹೇಳಿದೆ.